ಕಾರ್ಕಳ: ಹೆಬ್ರಿ ತಾಲೂಕಿನ ಕುಚ್ಚೂರು ಗ್ರಾಮದ ಬೇಳಂಜೆ ಕಲ್ಮನೆ ಎಂಬಲ್ಲಿ ಮಹಿಳೆಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ನಾಗರತ್ನ ಶೆಟ್ಟಿ(52) ಎಂಬುವರು ಮೃತಪಟ್ಟ ಮಹಿಳೆಯಾಗಿದ್ದು ಅವರು ಮಧ್ಯ ಸೋಮವಾರ ಮಧ್ಯಾಹ್ನ ಕೃಷಿ ಕೆಲಸ ಮುಗಿಸಿ ಕೈ ಕಾಲು ತೊಳೆಯಲೆಂದು ಹೊಳೆಗೆ ಇಳಿದ ಸಂದರ್ಭದಲ್ಲಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ
ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ
Kshetra Samachara
22/08/2022 10:47 pm