ಬೆಳ್ಳಣ್: ಸಮೀಪದ ಮುಂಡ್ಕೂರು ಅರದಾಲು ಬಳಿಯ ಅಭಿಷೇಕ್ (19) ಸೋಮವಾರ ಸಂಶಯಾಸ್ಪದವಾಗಿ ಸಾವಿಗೀಡಾಗಿದ್ದಾರೆ.
ಮುಂಡ್ಕೂರು ಅರದಾಲು ಬಳಿಯ ದೀಪಕ್ ಅವರ ಪುತ್ರ ಅಭಿಷೇಕ್ ನಿಟ್ಟೆಯಲ್ಲಿ ಡಿಪ್ಲೊಮಾ ಓದುತ್ತಿದ್ದು, ಅಜ್ಜಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ. ಅಪರಿಚಿತ ಯುವಕರಿಬ್ಬರು ಅವರನ್ನು ಹುಡುಕಿಕೊಂಡು ಬಂದಿದ್ದರು ಹಾಗೂ ಇತರ ಸಂಶಯಗಳಿಂದಾಗಿ ಶವವನ್ನು ಮರಣೋತ್ತರ ಪರೀಕ್ಷೆಗೆ ಮಣಿಪಾಲ ಆಸ್ಪತ್ರೆಗೆ ಕೊಂಡೊಯ್ಯಲು ಪೊಲೀಸರು ನಿರ್ದೇಶನ ನೀಡಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸರು ವೃತ್ತ ನಿರೀಕ್ಷಕರ ಮಾರ್ಗದರ್ಶನದಲ್ಲಿ ತನಿಖೆ ನಡೆಸುತ್ತಿದ್ದಾರೆ.
ಅಭಿಷೇಕ್ ಅವರು ಕ್ರೀಡೆ, ನೃತ್ಯ ಹಾಗೂ ಇತರ ಕ್ಷೇತ್ರಗಳಲ್ಲಿ ಚುರುಕಾಗಿದ್ದರು. ಅವರು ತಂದೆ, ತಾಯಿ, ಅಣ್ಣ ಹಾಗೂ ತಂಗಿಯನ್ನು ಅಗಲಿದ್ದಾರೆ.
Kshetra Samachara
23/08/2022 11:50 am