ಮಂಗಳೂರು: ಕೆಎಂಎಫ್ ಸಂಸ್ಥೆಯಲ್ಲಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ 184 ಮಂದಿಗೆ ಕೋಟ್ಯಂತರ ರೂ. ವಂಚನೆಗೈದಿರುವ ಪ್ರಕರಣದಲ್ಲಿ ಮಹಿಳೆ ಸೇರಿದಂತೆ ಮತ್ತೆ ಮೂವರು ವಂಚಕರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ರಮೇಶ್ ಪೂಜಾರಿ ಬಿ. (41), ಮಂಗಳೂರಿನ ಪಡೀಲು ಅಳಪೆ ನಿವಾಸಿ ಚಂದ್ರಾವತಿ (36) , ಬೆಂಗಳೂರು ದೊಡ್ಡ ತೋಗೂರಿನ ಸುರೇಂದ್ರ ರೆಡ್ಡಿ (35) ಬಂಧಿತ ವಂಚಕರು.
ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ರಾಮಪ್ರಸಾದ್ ರಾವ್ ಪಿ ಎಂಬಾತನನ್ನು ಇತ್ತೀಚೆಗೆ ಬಂಧಿಸಲಾಗಿತ್ತು. ಇದೀಗ ಬಂಧಿತರ ಸಂಖ್ಯೆ 4 ಕ್ಕೆ ಏರಿಕೆಯಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನವನ್ನು ವಿಧಿಸಿದೆ.
PublicNext
24/08/2022 03:28 pm