ಕುಂದಾಪುರ: ನಿದ್ರಾ ಹೀನಾತೆಯಿಂದ ಬಳಲುತ್ತಿದ್ದ ಮಹಿಳೆಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ಹಾವಂಜೆ ಗ್ರಾಮದ ದೇವಸ್ಥಾನ ಬೆಟ್ಟು ಎಂಬಲ್ಲಿ ನಡೆದಿದೆ.
ದೇವಸ್ಥಾನಬೆಟ್ಟು ನಿವಾಸಿ ಪಾರ್ವತಿ ಅವರ ಮಗಳು 36ವರ್ಷ ಪ್ರಾಯದ ಉಷಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ಗುರುತಿಸಲಾಗಿದೆ. ಇವರು ನಿದ್ರಾ ಹೀನಾತೆಯಿಂದ ಬಳಲುತ್ತಿದ್ದು, ಹಿರಿಯಡ್ಕ ಹಾಗೂ ಉಡುಪಿಯ ಟಿಎಂಎ ಪೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಆದರೂ ಆರೋಗ್ಯ ಸುಧಾರಿಸಿಲ್ಲ. ಇದೇ ಕಾರಣದಿಂದ ಜೀವನದಲ್ಲಿ ಬೇಸತ್ತು ಆ.24ರ ರಾತ್ರಿಯಿಂದ ಆ.25ರ ಬೆಳಗಿನ ಜಾವ 3ಗಂಟೆಯ ಮಧ್ಯಾವಧಿಯಲ್ಲಿ ಮನೆಯ ಹತ್ತಿರದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
27/08/2022 12:50 pm