ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಕದ್ದ ಕಳ್ಳರು

ಮಣಿಪಾಲ : ಮಣಿಪಾಲದಿಂದ ಪರ್ಕಳ ಕಡೆಗೆ ಹೋಗುವ ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಬೆಳ್ತಂಗಡಿಯ ಚಂದ್ರಹಾಸ ಎಂಬುವವರಿಗೆ ಸೇರಿದ ದ್ವಿಚಕ್ರ ವಾಹನ ಕಳವಾಗಿರುವ ಬಗ್ಗೆ ಮಣಿಪಾಲ ಠಾಣೆಯಲ್ಲಿ ದೂರು ದಾಖಲಾಗಿದೆ. ಚಂದ್ರಹಾಸ ಎಂ. ಅವರು ಮಣಿಪಾಲದಿಂದ ಪರ್ಕಳ ಕಡೆಗೆ ಹೋಗುವ ರಸ್ತೆಯ ಎಡ ಬದಿಯಲ್ಲಿ ತಮ್ಮ ದ್ವಿಚಕ್ರ ವಾಹನವನ್ನು ಕೀ ಸಮೇತ ನಿಲ್ಲಿಸಿ ಹೋಗಿದ್ದರು.

ಈ ಅವಧಿಯಲ್ಲಿ ಕಳ್ಳರು ಇವರ ಬೈಕ್ ನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಹಾಗೂ ಚಂದ್ರಹಾಸ ಅವರು ತಮ್ಮ ದ್ವಿಚಕ್ರ ವಾಹನವನ್ನು ಸುತ್ತಮುತ್ತ ಹಾಗೂ ಇತರ ಕಡೆಗಳಲ್ಲಿ ಹುಡುಕಾಡಿದರೂ ಪತ್ತೆಯಾಗಿಲ್ಲ ಎಂಬುದಾಗಿ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nirmala Aralikatti
Kshetra Samachara

Kshetra Samachara

27/08/2022 01:31 pm

Cinque Terre

8.17 K

Cinque Terre

1

ಸಂಬಂಧಿತ ಸುದ್ದಿ