ಕಾರ್ಕಳ: ಕಾರ್ಕಳ ಕಾಲೇಜೊಂದರ ಸೂಪರ್ ವೈಸರ್‌ನ ಕಿರುಕುಳಕ್ಕೆ ಮನನೊಂದ ಮಹಿಳಾ ಸೆಕ್ಯೂರಿಟಿ ಗಾರ್ಡ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾದ ಘಟನೆ ಇಂದು ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದವರನ್ನು ಸುನೀತಾ (33) ಎಂದು ಗುರುತಿಸಲಾಗಿದೆ. ಇವರು ಕಾಲೇಜಿನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡಕೊಂಡಿದ್ದು, ಕೆಲಸಕ್ಕೆ ಸೇರಿದ ಒಂದು ತಿಂಗಳ ಬಳಿಕ ಕಾಲೇಜಿನಲ್ಲಿ ಸೆಕ್ಯುರಿಟಿ ಸೂಪರ್‌ವೈಸರ್ ಆಗಿ ಕೆಲಸ ಮಾಡಿಕೊಂಡಿರುವ ಹಿರಿಯಣ್ಣ ಎಂಬವರು ಜಾತಿ ನಿಂದನೆ ಮಾಡುತ್ತಿದ್ದರು ಮತ್ತು ಸಣ್ಣಪುಟ್ಟ ವಿಚಾರಕ್ಕೂ ಕಿರಿಕಿರಿ ಮಾಡುತ್ತಿದ್ದರು ಎಂದು ದೂರಲಾಗಿದೆ.
ಈ ಬಗ್ಗೆ ಸುನೀತಾ ಅವರು ಎರಡು ಬಾರಿ ಕಾಲೇಜಿನ ಮೇಲಾಧಿಕಾರಿಯವರಿಗೆ ದೂರು ನೀಡಿದ್ದರು. ಆದರೆ ಯಾವುದೇ ಕ್ರಮ ಆಗಿಲ್ಲ. ಇದರಿಂದ ಬೇಸತ್ತ ಸುನೀತಾ ಇಂದು ಕಾಲೇಜಿನಲ್ಲಿ ಪಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥಗೊಂಡಿದ್ದರು. ಬಳಿಕ ಅವರನ್ನು ಕಾರ್ಕಳ ಸರಕಾರಿಗೆ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
28/08/2022 05:55 pm