ಕುಂದಾಪುರ: ಬೈಂದೂರು ಆಹಾರ ನಿರೀಕ್ಷಕ ವಿನಯಕುಮಾರ್ ನೇತೃತ್ವದ ತಂಡ ಅನ್ನ ಭಾಗ್ಯ ಯೋಜನೆಯ ಅಕ್ಕಿ ಅಕ್ರಮ ಸಾಗಾಟ ಪ್ರಕರಣ ಪತ್ತೆ ಹಚ್ಚಿದೆ. ಕಿರಿಮಂಜೇಶ್ವರ ಗ್ರಾಮದ, ಅರೆ ಹೊಳೆಯಲ್ಲಿ ಪೊಲೀಸ್ ಸಿಬ್ಬಂದಿ ಸಹಯೋಗದೊಂದಿಗೆ ಲಾರಿಯನ್ನು ಪರಿಶೀಲಿಸಿದಾಗ 15 ಟನ್‌ನಷ್ಟು ಅಕ್ಕಿ ಇರುವುದು ಕಂಡುಬಂದಿದೆ. ಅಕ್ಕಿಯನ್ನು ಯಾವುದೇ ಪರವಾನಿಗೆ ಯಿಲ್ಲದೆ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. 3.60 ಲಕ್ಷ ರೂ. ಮೌಲ್ಯದ ಅಕ್ಕಿ ಸ್ವಾಧಿನಪಡಿಸಿಕೊಳ್ಳಲಾಗಿದ್ದು ,ಬೈಂದೂರು ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Kshetra Samachara
02/09/2022 10:24 am