ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರು: ಕಡವೆ ಬೇಟೆಯಾಡಿ ಮಾಂಸ ಸಾಗಾಟ: ಇಬ್ಬರ ಬಂಧನ

ಬೈಂದೂರು: ತಾಲೂಕಿನ ಒತ್ತಿನೆಣೆ ಸಮೀಪ ಕಡವೆ ಭೇಟೆಯಾಡಿ ಮಾಂಸ ಮಾಡಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ನಝೀರ್ (20), ಅಬ್ದುಲ್ ಅಲಿ (23) ಬಂಧಿತರು.

ಒತ್ತಿನೆಣೆ ಪರಿಸರದಲ್ಲಿ ಕಡವೆ ಬೇಟೆ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬೈಂದೂರು ಪೊಲೀಸರು ಸ್ಥಳಕ್ಕೆ ದಾಳಿ ಮಾಡಿದ್ದರು. ಆದರೆ ಸ್ಥಳದಲ್ಲಿ ಯಾರೂ ಇರಲಿಲ್ಲ. ಅಲ್ಲಿ ಸಿಕ್ಕಂತಹ ಕುರುಹುಗಳ ಆಧಾರದ ಮೇಲೆ ನಾಕಾಬಂದಿ ಮಾಡಿ,ಸಂಶಯಾಸ್ಪದವಾಗಿ ಸ್ಕೂಟಿಯಲ್ಲಿ ಸಂಚರಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ 20 ಕೆ.ಜಿ ಕಡವೆ ಮಾಂಸ ಸಾಗಾಟ ಮಾಡುತ್ತಿದ್ದುದು ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಹೆಚ್ಚಿನ ವಿಚಾರಣೆಗೆ

ಆರೋಪಿಗಳನ್ನು ಒಂದು ದಿನ ವಲಯ ಅರಣ್ಯ ಇಲಾಖೆಯ ವಶಕ್ಕೆ ನೀಡಲಾಗಿದೆ. ಬೈಂದೂರು

ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : PublicNext Desk
Kshetra Samachara

Kshetra Samachara

03/09/2022 02:16 pm

Cinque Terre

7.13 K

Cinque Terre

4