ಕುಂದಾಪುರ: ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಎರಡು ಕಡೆಗಳಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಭೂ ವಿಜ್ಞಾನಿ ಕು.ಸಂಧ್ಯಾ ಅವರು ದಾಳಿ ನಡೆಸಿ 4 ಲಾರಿ ಸಹಿತ, 8 ಮೆಟ್ರಿಕ್ ಟನ್ ಮರಳು, 14 ಮೆಟ್ರಿಕ್ ಟನ್ ಕೆಂಪುಕಲ್ಲು ವಶಕ್ಕೆ ಪಡೆದಿದ್ದಾರೆ.
ಉಡುಪಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಸಂದೀಪ್ ಜಿ. ಯು ಮಾರ್ಗದರ್ಶನದಲ್ಲಿ ಮುಂಜಾನೆ ಕುಂದಾಪುರ ತಾಲೂಕು ಹಕ್ಲಾಡಿ ಗ್ರಾಮದ ಬಟ್ಟೆಕುದ್ರು ಪರಿಸರದ ಚಕ್ರ ನದಿಯಲ್ಲಿ ಅನಧಿಕೃತವಾಗಿ ಮರಳುಗಾರಿಕೆ ನಡೆಸಲಾಗುತ್ತಿತ್ತು. ಈ ಬಗ್ಗೆ ಸಾರ್ವಜನಿಕರ ಮಾಹಿತಿ ಮೇರೆಗೆ ಇಲಾಖೆಯ ಭೂ ವಿಜ್ಞಾನಿ ಸಂಧ್ಯಾ ಅವರು ಮುಂಜಾನೆ 5.30ಕ್ಕೆೆ ದಾಳಿ ನಡೆಸಿ 8 ಮೆಟ್ರಿಕ್ ಟನ್ ಮರಳು ಸಹಿತ ಲಾರಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಇನ್ನೂಂದು ಪ್ರಕರಣದಲ್ಲಿ ಕುಂದಾಪುರ ತಾಲೂಕು ಆಲೂರು ಗ್ರಾಾಮದಲ್ಲಿನ ಅನಧಿಕೃತ ಕೆಂಪುಕಲ್ಲು ಕ್ವಾರಿಗಳಿಂದ ಕೆಂಪು ಕಲ್ಲು ಸಾಗಣೆ ಮಾಡುತ್ತಿದ್ದ ಮೂರು ಲಾರಿ ಮತ್ತು 14 ಮೆಟ್ರಿಕ್ ಟನ್ ಕೆಂಪುಕಲ್ಲುಗಳನ್ನು ಹೊಸಾಡು ಗ್ರಾಮದ ಬಂಟ್ವಾಡಿ ಪರಿಸರದಲ್ಲಿ ದಾಳಿ ನಡೆಸಿ ವಶಕ್ಕೆ ತೆಗೆದುಕೊಂಡಿದ್ದಾರೆ. ಭೂವಿಜ್ಞಾನಿಯವರು ಪ್ರಕರಣ ದಾಖಲಿಸಿಕೊಂಡಿದ್ದು ಖನಿಜ ಸಹಿತವಶಪಡಿಸಿಕೊಂಡಿರುವ ನಾಲ್ಕು ವಾಹನಗಳನ್ನು ಗಂಗೊಳ್ಳಿ ಪೊಲೀಸ್ ಠಾಣೆ ಸುಪರ್ದಿಯಲ್ಲಿ ಇರಿಸಲಾಗಿದೆ.
Kshetra Samachara
05/09/2022 03:12 pm