ಮಂಗಳೂರು: ಇನ್ ಸ್ಟಾಗ್ರಾಂನಲ್ಲಿ ಪರಿಚಯವಾದ ಅಪ್ರಾಪ್ತೆಯನ್ನು ಆಕೆಯ ಮನೆಯಲ್ಲಿಯೇ ಅತ್ಯಾಚಾರಗೈದಿರುವ 17 ವರ್ಷದ ಬಾಲಕನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಖಾಸಗಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ 16 ವರ್ಷದ ಬಾಲಕಿಗೆ ಸುಮಾರು ಒಂದು ವರ್ಷಗಳ ಹಿಂದೆ ಇನ್ ಸ್ಟಾಗ್ರಾಂನಲ್ಲಿ 17 ವರ್ಷದ ಕಾನೂನು ಸಂಘರ್ಷಕ್ಕೊಳಗಾದ ಬಾಲಕನ ಪರಿಚಯವಾಗಿದೆ. ಆತ ಮೊಬೈಲ್ ನಲ್ಲಿ ಬಾಲಕಿಗೆ ಮೇಸೇಜ್ ಮಾಡುತ್ತಿದ್ದ. ಈ ವೇಳೆ ಆತ ಬಾಲಕಿಯ ಮನೆಗೆ ಬರುವುದಾಗಿ ತಿಳಿಸುತ್ತಿದ್ದಾನೆ.
2022ರ ಆಗಸ್ಟ್ 13ರಂದು ಆತ ನಾನು ಮನೆಗೆ ಬರುತ್ತಿದ್ದೇನೆ ನೀನು ಬಾಗಿಲು ತೆಗೆಯಬೇಕು ತೆಗೆಯದಿದ್ದರೆ ಮನೆಯವರ ಮುಂದೆ ಗಲಾಟೆ ಮಾಡುತ್ತೇನೆಂದು ಬೆದರಿಸಿದ್ದಾನೆ. ಅದತೆ ಆತ ಅಂದು ರಾತ್ರಿ ಎಲ್ಲರೂ ಮಲಗಿರುವ ವೇಳೆ ರಾತ್ರಿ 12 ಗಂಟೆಗೆ ಬಾಲಕಿಯ ಮನೆಗೆ ಬಂದಿದ್ದಾನೆ. ಬಾಲಕಿ ಮನೆಯಲ್ಲಿ ಎಲ್ಲರೂ ಮಲಗಿರುವುದನ್ನು ಖಚಿತ ಪಡಿಸಿಕೊಂಡು ಮನೆಯ ಮುಂಭಾಗದ ಬಾಗಿಲು ತೆರೆದಿದ್ದಾರೆ. ಇಬ್ಬರೂ ಆಕೆಯ ಕೊಠಡಿಗೆ ಹೋಗಿದ್ದಾರೆ. ಅಲ್ಲಿ ಆತ ಬಾಲಕಿಯ ಮೇಲೆ ಒತ್ತಾಯ ಪೂರ್ವಕವಾಗಿ ಲೈಂಗಿಕ ಸಂಪರ್ಕ ಬೆಳೆಸಿದ್ದಾನೆ.
ಈ ವಿಚಾರವನ್ನು ಯಾರಲ್ಲಿಯೂ ಹೇಳಿದರೆ ನಿನ್ನನ್ನು ಕೊಲ್ಲದೇ ಬಿಡುವುದಿಲ್ಲವೆಂದು ಬೆದರಿಕೆ ಹಾಕಿದ್ದಾನೆ. ಆ ಬಳಿಕವೂ ಇದೇ ರೀತಿ ಈತ 4-5 ಸಲ ಬಂದು ಲೈಂಗಿಕ ಸಂಪರ್ಕ ನಡೆಸಿದ್ದನು. ಸೆಪ್ಟೆಂಬರ್ 2ರಂದು ಈತ ರಾತ್ರಿ ಮನೆಗೆ ಬರುತ್ತೇನೆಂದು ಬಾಲಕಿಗೆ ತಿಳಿಸಿದ್ದಾನೆ. ಆದರೆ ಆಕೆ ಬೇಡವೆಂದೂ ಹೇಳಿದ್ದರೂ, ರಾತ್ರಿ ಬಂದಿದ್ದಾನೆ. ಆತ ಅಂದು ಅಂದು ಸುಮಾರು 11.50 ಗಂಟೆಗೆ ಮನೆಗೆ ಬಂದು ಲೈಂಗಿಕ ಸಂಪರ್ಕ ಎಸಗಿದ್ದಾನೆಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಈ ದೂರಿನನ್ವಯ ಪೊಕ್ಸೊ ಕಾಯ್ದೆ 2012 ಐಪಿಸಿಯಂತೆ ಪ್ರಕರಣ ದಾಖಲಾಗಿ ತನಿಖೆ ನಡೆಸಲಾಗುತ್ತಿದೆ.
Kshetra Samachara
05/09/2022 06:05 pm