ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮಹಿಳೆಯರ ಸರ ಸುಲಿಗೆ ಮಾಡುತ್ತಿದ್ದ ಮೂವರು ಅರೆಸ್ಟ್

ಮಂಗಳೂರು: ನಗರದಲ್ಲಿ ಮಹಿಳೆಯರ ಸರ ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಲಿಗೆ ಮಾಡಿದ ಸುಮಾರು 90 ಗ್ರಾಂ ತೂಕದ ಚಿನ್ನಾಭರಣಗಳ ಸಹಿತ 2 ಸ್ಕೂಟರ್, 3 ಮೊಬೈಲ್ ಪೋನ್ ಗಳು ಸೇರಿದಂತೆ ಒಟ್ಟು 5 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ.

ಕುಲಶೇಖರ, ಶಕ್ತಿನಗರ ರಸ್ತೆ, ಕಲ್ಪನೆ ನಿವಾಸಿ ಜಗದೀಶ್ ಶೆಟ್ಟಿ(39), ಉರ್ವಸ್ಟೋರ್ ನಿವಾಸಿ‌ ಸುಜಿತ್ ಶೆಟ್ಟಿ ಪ್ರಾಯ(40), ಕೊಂಚಾಡಿ, ಪದವಿನಂಗಡಿ ನಿವಾಸಿ ಸುರೇಶ್ ರೈ(39) ಬಂಧಿತ ಆರೋಪಿಗಳು. ಆಗಸ್ಟ್ ನಲ್ಲಿ ಮಂಗಳೂರಿನ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2 ಸರ ಸುಲಿಗೆ ಪ್ರಕರಣ ಮತ್ತು ಕಂಕನಾಡಿ ಠಾಣಾ ವ್ಯಾಪ್ತಿಯಲ್ಲಿ ಒಂದು ಸರ ಸುಲಿಗೆ ಪ್ರಕರಣ ದಾಖಲಾಗಿತ್ತು.‌ ಈ ಸರ ಸುಲಿಗೆ ಮಾಡಿರುವ ಆರೋಪಿಗಳ ಪತ್ತೆಗೆ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಹಾಗೂ ಸಿಸಿಬಿ ಅಧಿಕಾರಿ, ಸಿಬ್ಬಂದಿಯವರು ಪತ್ತೆ ಕಾರ್ಯ ನಡೆಸಿದ್ದಾರೆ.

ಮಹಿಳೆಯರ ಸರ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿರುವ ಮೂವರು ಆರೋಪಿಗಳನ್ನು ಮಂಗಳೂರು ನಗರದ ಕಾರ್ ಸ್ಟ್ರೀಟ್ ಬಳಿ ಚಿನ್ನದ ಸರವನ್ನು ಮಾರಾಟ ಮಾಡಲು ಬಂದಿರುವ ವೇಳೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಆರೋಪಿಗಳ ಪೈಕಿ ಜಗದೀಶ್ ನು ರಿಕ್ಷಾ ಚಾಲಕನಾಗಿದ್ದು, ಸುಜಿತ್ ಶೆಟ್ಟಿ ಪೈನಾನ್ಸ್ ವ್ಯವಹಾರ ನಡೆಸುತ್ತಿದ್ದು, ಸುರೇಶ್ ರೈ ಟೆಂಪೋ ಚಾಲಕನಾಗಿರುತ್ತಾನೆ. ಸುಜಿತ್ ಶೆಟ್ಟಿ ಎಂಬಾತನು ಮಂಗಳೂರಿನಲ್ಲಿ 2002 ರಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣದ ಆರೋಪಿಯಾಗಿದ್ದನು.

ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagesh Gaonkar
Kshetra Samachara

Kshetra Samachara

05/09/2022 10:56 pm

Cinque Terre

13.23 K

Cinque Terre

2

ಸಂಬಂಧಿತ ಸುದ್ದಿ