ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಕೋರ್ಟ್‌ಗೆ ಹಾಜರಾಗದೆ 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೇರಳ ಮೂಲದ ವ್ಯಕ್ತಿಯನ್ನು ಬಜ್ಪೆ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಕೇರಳ ರಾಜ್ಯದ ಹೊಸದುರ್ಗ ಜಿಲ್ಲೆಯ ಹರಿಪುರಂನ ನಿವಾಸಿ ಮಹಮ್ಮದ್ ಕುಂಞಿ(53) ಬಂಧಿತ ಆರೋಪಿ. ಆರೋಪಿ ಮಹಮ್ಮದ್ ಕುಂಞಿ 2008ರ ಅಕ್ಟೋಬರ್ 5ರಂದು ನಕಲಿ‌ ಪಾಸ್ ಪೋರ್ಟ್ ಬಳಸಿ ದುಬೈಗೆ ಹಾರಲು ಯತ್ನಿಸಿದ್ದ. ಈ ವೇಳೆ ಇಮಿಗ್ರೇಷನ್ ಅಧಿಕಾರಿಗಳು ಈತನನ್ನು ವಶಕ್ಕೆ ತೆಗೆದುಕೊಂಡು ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆ ಬಳಿಕ‌ ಈತ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೆ 10 ವರ್ಷಗಳ ಕಾಲ ಕೇರಳದಲ್ಲಿ ವಿಳಾಸ ಬದಲಿಸುತ್ತಾ ತಲೆಮರೆಸಿಕೊಂಡಿದ್ದ. ಇದೀಗ ಆತನನ್ನು ಪತ್ತೆಹಚ್ಚಿರುವ ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
Kshetra Samachara

Kshetra Samachara

08/09/2022 02:38 pm

Cinque Terre

5.56 K

Cinque Terre

0

ಸಂಬಂಧಿತ ಸುದ್ದಿ