ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಸ್ನೇಹಿತರಿಂದಲೇ ಕೊಲೆ: ಆರೋಪಿಗಳಿಗೆ ನ್ಯಾಯಾಂಗ ಬಂಧನ

ಕುಂದಾಪುರ: ಮನೆಯಿಂದ ಕಾಣೆಯಾಗಿ ವಾರದ ಬಳಿಕ ಅರಾಹಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಯುವಕನನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಬಗ್ಗೆ ಮರಣೋತ್ತರ ಪರೀಕ್ಷೆಯಲ್ಲಿ ದೃಢಗೊಂಡಿದ್ದು, ಶಂಕರನಾರಾಯಣ ಪೊಲೀಸರು ಕೊಲೆ ಪ್ರಕರಣದಡಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.ಆರೋಪಿಗಳು ಕೊಲೆಯಾದ ವಿನಯ ಪೂಜಾರಿಯ ಸ್ನೇಹಿತರು.

ಕುಂದಾಪುರ ತಾಲೂಕಿನ ಹಂಗಳೂರು ಗ್ರಾಮದ ಚೌಕುಡಿಬೆಟ್ಟು ನಿವಾಸಿ ಯಾದ ವಿನಯ ಪೂಜಾರಿ (26) ಕೊಲೆಯಾದ ಯುವಕ. ಈ ಪುಕರಣದಲ್ಲಿ ಆರೋಪಿಗಳಾದ ಕುಂದಾಪುರ ಹಂಗಳೂರು ಹೊಸತಪ್ಪು ನಿವಾಸಿ ಅಕ್ಷಯ (28) ಬನ್ನೂರು ಗುಂಡಿಗೋಳಿ ನಿವಾಸಿಗಳಾದ ಪ್ರವೀಣ್ ಪೂಜಾರಿ ಹಾಗೂ ಸತೀಶ್ ಪೂಜಾರಿ ಬಂಧಿತ ಆರೋಪಿಗಳಾಗಿದ್ದಾರೆ. ಮೂವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Edited By : PublicNext Desk
Kshetra Samachara

Kshetra Samachara

09/09/2022 08:23 am

Cinque Terre

6.59 K

Cinque Terre

1