ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ನಾವುಂದ ಕಡಲ ಕಿನಾರೆಯಲ್ಲಿ ಯುವಕನ ಶವ ಪತ್ತೆ

ಕುಂದಾಪುರ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವುದಕ್ಕೆ ಮನನೊಂದು ವಿದ್ಯಾರ್ಥಿಯೋರ್ವ ರಾಷ್ಟ್ರೀಯ ಹೆದ್ದಾರಿ 66ರ ಕುಂದಾಪುರ ತಾಲೂಕಿನ ಹೇರಿಕುದ್ರು ಸೇತುವೆ ಮೇಲಿಂದ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಮದ್ಯಾಹ್ನ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಕುಂದಾಪುರದ ವಡೇರಹೋಬಳಿ ಜೆ.ಎಲ್.ಬಿ. ರಸ್ತೆ ನಿವಾಸಿ ರಘುವೀರ್ ಶೆಟ್ಟಿ ಎಂಬುವರ ಮಗ ಸಾಯಿಷ್ ಶೆಟ್ಟಿ ಎಂದು ಗುರುತಿಸಲಾಗಿದೆ.

ಸಾಯಿಷ್ ಶೆಟ್ಟಿ ಶಿವಮೊಗ್ಗದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದು ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವ ನಿರೀಕ್ಷೆ ಹೊಂದಿದ್ದ ಆದರೆ ಫಲಿತಾಂಶದಲ್ಲಿ ತೀರಾ ಕಡಿಮೆ ಅಂಕ ಬಂದಿರುವುದು ತಿಳಿದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

ನಿನ್ನೆಯಿಂದ ಯುವಕನ ಮೃತದೇಹದ ಹುಡುಕಾಟದ ಶೋಧ ಕಾರ್ಯ ಮುಂದುವರೆದಿದ್ದು. ಈ ದಿನ ಬೆಳಗ್ಗೆ ನಾವುಂದ ಕಡಲಕಿನಾರೆಯಲ್ಲಿ ಮೃತದೇಹ ಪತ್ತೆಯಾಗಿದ್ದು. ಸ್ಥಳಕ್ಕೆ ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಸಾವಿರಾರು ನೆಟ್ಟಿಗರು ಆಗಮಿಸಿದ್ದು ಇಷ್ಟು ಚಿಕ್ಕ ವಯಸ್ಸಿನಲ್ಲಿ ಇಂತಹ ಸಾವು ಬರಬಾರದೆಂದು ಬೇಸರ ವ್ಯಕ್ತಪಡಿಸಿದರು.

Edited By : Shivu K
Kshetra Samachara

Kshetra Samachara

09/09/2022 11:19 am

Cinque Terre

11.61 K

Cinque Terre

1

ಸಂಬಂಧಿತ ಸುದ್ದಿ