ಕುಂದಾಪುರ: ಇಲ್ಲಿನ ಕಿರಿಮಂಜೇಶ್ವರ ಗ್ರಾಪಂ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳ ನಿಶ್ಚಿತಾರ್ಥಕ್ಕೆ ಸಿದ್ಧತೆ ನಡೆಸುತ್ತಿರುವ ವಿಷಯ ತಿಳಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ನೇತೃತ್ವದ ತಂಡ ನಿಶ್ಚಿತಾರ್ಥವನ್ನು ತಡೆದ ಪ್ರಸಂಗ ನಡೆದಿದೆ.
ಬಳಿಕ ಮಕ್ಕಳ ಕಲ್ಯಾಣ ಸಮಿತಿಗೆ ಬಾಲಕಿ ಹಾಗೂ ಪೋಷಕರನ್ನು ಹಾಜರುಪಡಿಸಿ, ಬಾಲಕಿ ಪ್ರಾಪ್ತ ವಯಸ್ಸಿಗೆ ಬರುವತನಕ ಮದುವೆ ಮಾಡದಿರುವಂತೆ ತಿಳಿಹೇಳಿ ಬಾಲಕಿಯನ್ನು ಪೋಷಕರ ಸುಪರ್ದಿಗೆ ನೀಡಲಾಯಿತು.
ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಮಹೇಶ್, ಗ್ರಾಪಂ ಉಪಾಧ್ಯಕ್ಷ ಶೇಖರ್ ಖಾರ್ವಿ, ಗ್ರಾಪಂ ಅಭಿವೃದ್ಧಿ ಅಧಿಕಾರಿ ರಾಜೇಶ್, ಗ್ರಾಮ ಲೆಕ್ಕಿಗ, ಅಂಗನವಾಡಿ ಮೇಲ್ವಿಚಾರಕಿ, ಅಂಗನವಾಡಿ ಕಾರ್ಯಕರ್ತೆ ಹಾಗೂ ಆಶಾ ಕಾರ್ಯಕರ್ತರ ತಂಡ ಬಾಲಕಿಯ ಮನೆಗೆ ಭೇಟಿ ನೀಡಿ ನಡೆಸಲು ಉದ್ದೇಶಿಸಿದ್ದ ನಿಶ್ಚಿತಾರ್ಥ ಕಾರ್ಯಕ್ರಮ ರದ್ದುಗೊಳಿಸಲು ಸೂಚಿಸಿತು.ಬಳಿಕ ಅಪ್ರಾಪ್ತ ಬಾಲಕಿ ಹಾಗೂ ಹುಡುಗನ ಮನೆಯವರ ಜೊತೆ ಸಮಾಲೋಚನೆ ನಡೆಸಿ ಮನವರಿಕೆ ಮಾಡಿಕೊಡಲಾಯಿತು.
Kshetra Samachara
10/09/2022 09:50 pm