ಸುಳ್ಯ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯ ಬಳಿಕ ಸಹಜ ಸ್ಥಿತಿಯತ್ತ ಮರಳುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ ತಲೆದೊರುವಂತಹ ಘಟನೆಯೊಂದು ಇಂದು (ಶನಿವಾರ) ಸಂಜೆ ಜರುಗಿದೆ.
ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಫೀಕ್ ಎಂಬಾತನ ಸಹೋದರ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ಬೆಳ್ಳಾರೆ ಠಾಣೆ ಮುಂದೆ ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ ಘಟನೆ ಸೆ 10 ರಂದು ಬೆಳಿಗ್ಗೆ ಬೆಳ್ಳಾರೆಯಲ್ಲಿ ನಡೆದಿದೆ.
ಹಿಂದೂ ಸಂಘಟನೆಯ ಕಾರ್ಯಕರ್ತ ಹಾಗೂ ಬೆಳ್ಳಾರೆಯ ಅಮ್ಮು ರೈ ಕಾಂಪ್ಲೆಕ್ಸ್ ನ ಮ್ಯಾನೇಜರ್ ಪ್ರಶಾಂತ್ ರೈವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಶಫೀಕ್ ತಮ್ಮ, ಸಫ್ರಿದ್ ಜೀವ ಬೆದರಿಕೆ ಒಡ್ಡಿರುವುದಾಗಿ ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದಾರೆ. ಈತ ದಿ. ಪ್ರವೀಣ್ ನೆಟ್ಟಾರ್ ಅವರ ಕೋಳಿ ಫಾರ್ಮ್ ನಲ್ಲಿ ಕ್ಲಿನಿಂಗ್ ಕೆಲಸ ಮಾಡುತ್ತಿದ್ದ ಇಬ್ರಾಹಿಂ ಎಂಬವರ ಪುತ್ರ.
ಇಂದು ಸಂಜೆ ಪ್ರಶಾಂತ್ ರೈಯವರಿಗೆ ಕರೆ ಮಾಡಿರುವ ಸಫ್ರಿದ್ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿರುವುದಾಗಿಯೂ, ಕೊಲ್ಲುವುದಾಗಿ ಬೆದರಿಸಿರುವುದಾಗಿಯೂ ಆರೋಪಿಸಲಾಗಿದೆ. ಈ ಬಗೆಗಿನ ಆಡಿಯೋ ರೆಕಾರ್ಡ್ ಪ್ರಶಾಂತ್ ಬಳಿ ಇದೆ ಎನ್ನಲಾಗುತ್ತಿದೆ. ಪ್ರಶಾಂತ್ ಅವರು ದೂರು ನೀಡಿರುತ್ತಾರೆ.
Kshetra Samachara
10/09/2022 10:05 pm