ವಿಟ್ಲ: ಜಾಗದ ವಿಚಾರವಾಗಿ ಹಲವು ಸಮಯದಿಂದ ನಡೆಯುತ್ತಿದ್ದ ಸಹೋದರರ ನಡುವಿನ ಗಲಭೆ ಕೊಲೆಯಲ್ಲಿ ಅಂತ್ಯವಾದ ಘಟನೆ ಕೊಡಂಗೆ ಬನಾರಿಯಲ್ಲಿ ನಡೆದಿದೆ.
ಬನಾರಿ ಕೊಡಂಗೆ ನಿವಾಸಿ ಗಣೇಶ್ (53) ಸಾವನ್ನಪ್ಪಿದ್ದು, ಪದ್ಮನಾಭ (49) ಕೊಲೆ ಮಾಡಿದ್ದೆನ್ನಲಾಗಿದೆ. ಒಂದು ತಿಂಗಳ ಹಿಂದೆ ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮಂಗಳವಾರ ರಾತ್ರಿಯೂ ಗಲಾಟೆ ನಡೆದಿದೆ ಎನ್ನಲಾಗಿದ್ದು, ಬುಧವಾರ ಕೊಲೆಯಾಗಿದ್ದ ಬಗ್ಗೆ ವಿಟ್ಲ ಠಾಣೆಗೆ ದೂರು ಬಂದಿದೆ.
Kshetra Samachara
14/09/2022 12:36 pm