ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಝೊಮ್ಯಾಟೊ ಫುಡ್ ಡೆಲಿವರಿ ಬ್ಯಾಗ್ ನಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮೂವರ ಬಂಧನ

ಉಡುಪಿ: ಝೊಮ್ಯಾಟೊ ಫುಡ್ ಡೆಲಿವರಿ ಬ್ಯಾಗ್ ನಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಉಡುಪಿ ಸೆನ್ ಅಪರಾಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ರವಿ ಶಂಕರ್, ಅಂಜಲ್ ಬೈಜು ಹಾಗೂ ದೇವಿಪ್ರಸಾದ್ ಬಂಧಿತ ಆರೋಪಿಗಳು. ರವಿಶಂಕರ್ ಕೇರಳದ ಪಾಲಕ್ಕಾಡ್ ನಿಂದ ಗಾಂಜಾವನ್ನು ರೈಲಿನ ಮೂಲಕ ಉಡುಪಿಗೆ ತಂದು ಉಡುಪಿಯಲ್ಲಿ ಗಾಂಜಾ ಸೇವಿಸುವವರಿಗೆ ಹಾಗೂ ಮಾರಾಟ ಮಾಡುವವರಿಗೆ ಕೊಡುತ್ತಿದ್ದಾನೆಂಬ ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದೆ.

ಮಣಿಪಾಲ ಸಮೀಪದ ಮಂಚಿಯಲ್ಲಿ ಬಾಡಿಗೆಗೆ ಮನೆ ಮಾಡಿಕೊಂಡು ಕೆಲವು ಸ್ನೇಹಿತರೊಂದಿಗೆ ಉಳಿದುಕೊಂಡಿದ್ದ. ಇಂದ್ರಾಳಿಯಿಂದ ಮಂಚಿಗೆ ಹೋಗುವ ರಸ್ತೆಯಲ್ಲಿ ಈ ಮೂವರು ಆರೋಪಿಗಳು ಝೊಮ್ಯಾಟೊ ಫುಡ್ ಡೆಲಿವರಿ ಬ್ಯಾಗ್ ನಲ್ಲಿ ಗಾಂಜಾವನ್ನು ಇಟ್ಟುಕೊಂಡು ಗಿರಾಕಿ ಹಾಗೂ ಪೆಡ್ಲರ್ ಗಳಿಗಾಗಿ ಕಾಯುತ್ತಿದ್ದರು.ಈ ಬಗ್ಗೆ ಮಾಹಿತಿ ಪಡೆದ ಸೆನ್ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ ಸುಮಾರು 1 ಕೆಜಿ 277 ಗ್ರಾಂ ತೂಕದ ಗಾಂಜಾ, 2 ಬೈಕ್, ಝೊಮೆಟೊ ಫುಡ್ ಡೆಲಿವರಿ ಬ್ಯಾಗ್, 4 ಮೊಬೈಲ್ ಮತ್ತು ಮೂವತ್ತು ಸಾವಿರ ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.

Edited By : PublicNext Desk
Kshetra Samachara

Kshetra Samachara

18/09/2022 12:39 pm

Cinque Terre

10.27 K

Cinque Terre

3

ಸಂಬಂಧಿತ ಸುದ್ದಿ