ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಕಾರು ಹಾಯಿಸಿ ಕೊಲೆಗೆ ಯತ್ನ: ದೂರು ದಾಖಲು

ಶಂಕರನಾರಾಯಣ: ಜಾಗದ ತಕಾರಿಗೆ ಸಂಬಂಧಿಸಿ ತಮ್ಮ ಮೇಲೆ ಕಾರು ಹಾಯಿಸಿ ಕೊಲೆಗೆ ಯತ್ನಿಸಿರುವುದಾಗಿ ವ್ಯಕ್ತಿಯೊಬ್ಬರು ನಾಲ್ವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

ಕುಂದಾಪುರದ ಸಿದ್ದಾಪುರ ಗ್ರಾಮದ ಬಾಳೆಬೇರು ನಿವಾಸಿ ಸುಧರ್ಶನ್ ಶೆಟ್ಟಿ ದೂರು ನೀಡಿದ ವ್ಯಕ್ತಿ. ರಾಜರಾಮ ಶೆಟ್ಟಿ, ರಘುರಾಮ ಶೆಟ್ಟಿ, ಶ್ರೀಧರ ಶೆಟ್ಟಿ ಮಂಗನಸಾಲು, ಬಿ.ಪ್ರಕಾಶ್ಚಂದ್ರ ಶೆಟ್ಟಿ ಇವರೊಂದಿಗೆ ಸಿದ್ದಾಪುರ ಗ್ರಾಮದಲ್ಲಿ ಜಾಗದ ವಿಚಾರದಲ್ಲಿ ತಕರಾರು ಇದ್ದು, ಈ ಜಾಗದ ತಕರಾರು ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುತ್ತದೆ. ನ್ಯಾಯಾಲಯವು ಕುಂದಾಪುರ ತಹಶೀಲ್ದಾರರಿಗೆ ತಕರಾರು ಇರುವ ಜಾಗವನ್ನು ಸೆ.21 ರಂದು ಸರ್ವೇ ಮಾಡಿ ವರದಿ ನೀಡುವಂತೆ ಆದೇಶ ಮಾಡಿದೆ.

ಈ ಜಾಗದ ತಕರಾರಿನ ಬಗ್ಗೆ ಸುಧರ್ಶನ್ ಶೆಟ್ಟಿ ಯವರು ಹೆಚ್ಚಾಗಿ ಓಡಾಡುತ್ತಿದ್ದರು. ಇದರಿಂದ ತಮಗೆ ತೊಂದರೆ ಆಗಬಹುದು ಎಂದು ಆರೋಪಿಗಳು, ಸೆ.18 ರಂದು ಸುದರ್ಶನ್ ಶೆಟ್ಟಿ ಅವರು ತಮ್ಮ ಸ್ಕೂಟಿಯಲ್ಲಿ ಬಾಳೆಬೇರು ಎಂಬಲ್ಲಿ ಮನೆಯ ಸಮೀಪ ನಿಲ್ಲಿಸಿಕೊಂಡು ಮೊಬೈಲ್‌ನಲ್ಲಿ ಮಾತನಾಡುತ್ತಿದ್ದಾಗ ಕಾರಿನಲ್ಲಿ ಬಂದ ಆರೋಪಿಗಳು ಇವರ ಸ್ಕೂಟಿಯ ಮೇಲೆ ಕಾರು ಹಾಯಿಸಿದ್ದು, ಇದರಿಂದ ಸುಧರ್ಶನ್ ಶೆಟ್ಟಿರವರು ಜೋರಾಗಿ ಬೊಬ್ಬೆ ಹಾಕಿದಾಗ ಆರೋಪಿಗಳು ಕಾರನ್ನು ಅಲ್ಲಿಯೇ ಪರಾರಿಯಾಗಿದ್ದಾರೆ. ಅಪಘಾತದಿಂದ ರಸ್ತೆಗೆ ಬಿದ್ದ ಸುದರ್ಶನ್ ಶೆಟ್ಟಿ ಅವರು ಗಾಯಗೊಂಡಿದ್ದು, ಕುಂದಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವುದಾಗಿ ನೀಡಿದ ದೂರಿನಂತೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : PublicNext Desk
Kshetra Samachara

Kshetra Samachara

21/09/2022 08:33 am

Cinque Terre

16.42 K

Cinque Terre

0

ಸಂಬಂಧಿತ ಸುದ್ದಿ