ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ವಿದ್ಯಾರ್ಥಿನಿಯರು ಹಾಸ್ಟೆಲ್ ನಿಂದ ಪರಾರಿಯಾಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ದಾಖಲು

ಮಂಗಳೂರು: ನಗರದ ಮೇರಿಹಿಲ್ ನ ವಿಕಾಸ್ ಕಾಲೇಜಿನ ಹಾಸ್ಟೆಲಿನಿಂದ ರಾತ್ರೋರಾತ್ರಿ ವಿದ್ಯಾರ್ಥಿನಿಯರು ಪರಾರಿಯಾಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ.

ಮೇರಿಹಿಲ್ ನ ವಿಕಾಸ್ ಪಿಯು ಕಾಲೇಜಿನ, ಹಾಸ್ಟೆಲ್ ನಲ್ಲಿ ವಾಸ್ತವ್ಯವಿರುವ ಯಶಸ್ವಿನಿ, ದಕ್ಷತಾ, ಸಿಂಚನಾ ಎಂಬ ಮೂವರು ವಿದ್ಯಾರ್ಥಿನಿಯರು ಪರಾರಿಯಾದವರು.

ವಿದ್ಯಾರ್ಥಿನಿಯರು ನಸುಕಿನ ವೇಳೆ 3 ಗಂಟೆಗೆ ಹಾಸ್ಟೆಲ್ ನ ಕಿಟಕಿಯನ್ನು ಮುರಿದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿಯರು ತಮ್ಮ ಲಗ್ಗೇಜ್ ಸಹಿತ ಜೊತೆಯಾಗಿ ಪರಾರಿಯಾಗಿರುವ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದು, ಪರಾರಿಯಾದವರ ಸುಳಿವು ಇನ್ನೂ ಸಿಕ್ಕಿಲ್ಲ.

Edited By : Shivu K
PublicNext

PublicNext

21/09/2022 02:48 pm

Cinque Terre

41.3 K

Cinque Terre

35

ಸಂಬಂಧಿತ ಸುದ್ದಿ