ಹೆಬ್ರಿ: ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ಸಂಬಂಧಿಕನೇ ಅತ್ಯಾಚಾರವೆಸಗಿದ ಪರಿಣಾಮ ಆಕೆ ಗರ್ಭಿಣಿಯಾಗಿದ್ದು, ಇದೀಗ ಆರೋಪಿಯ ವಿರುದ್ಧ ಪೋಕ್ಸೋ ಕಾಯಿದೆಯಡಿ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಬ್ರಿ ತಾಲೂಕಿನ ಮುದ್ರಾಡಿ ಸಮೀಪದ ಬಚ್ಚಪ್ಪು ನಿವಾಸಿ ಆರೋಪಿ ಗಣೇಶ್ ಶೆಟ್ಟಿಗಾರ್ (23) ಕೃತ್ಯ ಎಸಗಿದ ಆರೋಪಿ. ಗಣೇಶ್ ತನ್ನ ದೂರದ ಸಂಬಂಧಿಯಾಗಿರುವ ವರಂಗ ಗ್ರಾಮದ 16ರ ಹರೆಯದ ಅಪ್ರಾಪ್ತ ಬಾಲಕಿಯು ಜು.30ರಂದು ಆತನ ಮನೆಗೆ ಹೋಗಿದ್ದಳು. ಈ ವೇಳೆ ಗಣೇಶ್ ಬಾಲಕಿಯನ್ನು ಪುಸಲಾಯಿಸಿ ಆಕೆಯ ಮೇಲೆ ಬಲವಂತವಾಗಿ ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಆಕೆ ಗರ್ಭಿಣಿಯಾಗಿದ್ದಾಳೆ ಎಂದು ಬಾಲಕಿಯ ಪೋಷಕರು ಹೆಬ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
PublicNext
21/09/2022 08:57 pm