ಮಂಗಳೂರು: ಎನ್ಐಎ ದಾಳಿಯ ವೇಳೆ ಪ್ರತಿಭಟನೆ ನಡೆಸಿದ ಪಿಎಫ್ಐ, ಎಸ್‌ಡಿಪಿಐನ 50ಕ್ಕೂ ಅಧಿಕ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಮಂಗಳೂರು ನಗರದ ನೆಲ್ಲಿಕಾಯಿ ರಸ್ತೆಯಲ್ಲಿರುವ ಪಿಎಫ್ಐ, ಎಸ್‌ಡಿಪಿಐ ಕಚೇರಿಗೆ ಎನ್ಐಎ ಬೆಳ್ಳಂಬೆಳಗ್ಗೆ ದಾಳಿ ನಡೆಸಿತ್ತು. ಈ ವೇಳೆ 200 ಕ್ಕೂ ಅಧಿಕ ಮಂದಿ ಕಾರ್ಯಕರ್ತರು ಜಮಾವಣೆಗೊಂಡು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು 50 ಕ್ಕೂ ಅಧಿಕ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡಿದೆ.
ಸದ್ಯ ಸ್ಥಳದಲ್ಲಿ ಅರೆಮೀಸಲು ಪಡೆ, ಪೊಲೀಸರು ಬೀಡು ಬಿಟ್ಟಿದ್ದು ಭಾರೀ ಕಟ್ಟೆಚ್ಚರ ವಹಿಸಿದೆ. ಪಿಎಫ್ಐ, ಎಸ್‌ಡಿಪಿಐ ಕಚೇರಿ ಇರುವ ಮಂಗಳೂರಿನ ನೆಲ್ಲಿಕಾಯಿ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ.
PublicNext
22/09/2022 08:49 am