ಮಲ್ಪೆ: ಮಲ್ಪೆ ವ್ಯಾಪ್ತಿಯ ಹೂಡೆ ಬೀಚ್‌ನಲ್ಲಿ ದುರ್ಘಟನೆ ಸಂಭವಿಸಿದ್ದು, ಮೂವರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿದ್ದಾರೆ. ಈ ಪೈಕಿ ಇಬ್ಬರು ಆಸ್ಪತ್ರೆಯಲ್ಲಿ ಅಸುನೀಗಿದ್ದು, ಮತ್ತೋರ್ವ ವಿದ್ಯಾರ್ಥಿಗಾಗಿ ಶೋಧಕಾರ್ಯ ನಡೆದಯುತ್ತಿದೆ ಎಂದು ಮುಳುಗು ತಜ್ಞ ಈಶ್ವರ್ ಮಲ್ಪೆ ಮಾಹಿತಿ ನೀಡಿದ್ದಾರೆ.
ಮಣಿಪಾಲ ಎಂಐಟಿ ಎಂಜಿನಿಯರಿಂಗ್ ಕಾಲೇಜಿನ ಈ ವಿದ್ಯಾರ್ಥಿಗಳು ರಜೆಯಲ್ಲಿ ಹೂಡೆ ಬೀಚ್ ಗೆ ಈಜಲೆಂದು ಹೋಗಿದ್ದರು. ಸಮುದ್ರದಲ್ಲಿ ಮುಳುಗಿದ್ದ ನಿಶಾಂತ್, ಷಣ್ಮುಖ ಎಂಬ ಇಬ್ಬರನ್ನು ಸ್ಥಳೀಯರು ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಿದರಾದರೂ ತೀವ್ರ ಅಸ್ವಸ್ಥಗೊಂಡಿದ್ದ ಅವರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಆದರೆ ವಿದ್ಯಾರ್ಥಿ ಶ್ರೀಕರ್‌ಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ಮಲ್ಪೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
Kshetra Samachara
25/09/2022 07:23 pm