ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಸಾಗಾಟದ 15.36 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.ಬಂಟ್ವಾಳ ಮೂಲದ ಪ್ರಯಾಣಿಕ ದುಬೈನಿಂದ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ್ದಾನೆ. ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡಿದಾಗ ಈತ ಒಳ ಉಡುಪಿನಲ್ಲಿ ಬಚ್ಚಿಟ್ಟು ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ತಕ್ಷಣ ಚಿನ್ನ ಸಹಿತ ಈ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ಈತನಿಂದ 306 ಗ್ರಾಂ ತೂಕದ 15,36,120 ಲಕ್ಷ ರೂ. ಮೌಲ್ಯದ 24 ಕ್ಯಾರೆಟ್ ಶುದ್ಧಚಿನ್ನವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
Kshetra Samachara
25/09/2022 09:58 pm