ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ವೃದ್ಧೆಯ ಕುತ್ತಿಗೆಯಲ್ಲಿದ್ದ 2 ಲಕ್ಷ ಮೌಲ್ಯದ ಚಿನ್ನದ ಸರ ಎಗರಿಸಿ ಯುವಕ ಪರಾರಿ

ಉಡುಪಿ: ನಗರದ ದೇವಸ್ಥಾನಕ್ಕೆ ಹೋಗಿ ಹಿಂದಿರುಗುತ್ತಿದ್ದ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಅಪಹರಿಸಿದ ಘಟನೆ ಸಂಭವಿಸಿದೆ.ಕುಂಜಿಬೆಟ್ಟು ಎಂಜಿಎಂ ಕ್ರೀಡಾಂಗಣ ಹಿಂಭಾಗದ ಸಾಯಿರಾಧಾ ನೆಸ್ಟ್ ವಸತಿ ಸಂಕೀರ್ಣದ ನಿವಾಸಿ ಪ್ರೇಮಾ ಶೇಣವ (62) ಎಂಬವರು ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನಕ್ಕೆ ಹೋಗಿ, ವಾಪಾಸು ಒಬ್ಬರೇ ನಡೆದುಕೊಂಡು ಎಂಜಿಎಂ ಕಾಲೇಜು ಮೈದಾನದ ಸಮೀಪದ ಮನೆಗೆ ಹಿಂದಿರುಗುತಿದ್ದ ವೇಳೆ ವೃದ್ಧೆಯ ಕುತ್ತಿಗೆಯಲ್ಲಿದ್ದ 50 ಗ್ರಾಂ ತೂಕದ ಚಿನ್ನದ ಸರವನ್ನು ಅಪರಿಚಿತ ಯುವಕ ಅಪಹರಿಸಿ ಪರಾರಿಯಾಗಿದ್ದಾನೆ.

ಸುಮಾರು 25ರಿಂದ 30 ವರ್ಷ ಪ್ರಾಯದ ಯುವಕ ಏಕಾಏಕಿ ಹಿಂದಿನಿಂದ ಬಂದು ಪ್ರೇಮಾ ಅವರ ಕೈಗಳನ್ನು ಗಟ್ಟಿಯಾಗಿ ಹಿಡಿದುಕೊಂಡು ಕುತ್ತಿಗೆಗೆ ಕೈ ಹಾಕಿ 50 ಗ್ರಾಂ ತೂಕದ ಚಿನ್ನದ ಸರವನ್ನು ಎಗರಿಸಿದ್ದಾನೆ.ಚಿನ್ನದ ಸರದ ಮೌಲ್ಯ 2.30 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : PublicNext Desk
Kshetra Samachara

Kshetra Samachara

05/10/2022 08:38 am

Cinque Terre

6.65 K

Cinque Terre

0

ಸಂಬಂಧಿತ ಸುದ್ದಿ