ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಸಾಗಾಟದ 38.53 ಲಕ್ಷ ರೂ‌. ಮೌಲ್ಯದ ಚಿನ್ನ ವಶಕ್ಕೆ

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನದಲ್ಲಿ ಅಕ್ರಮ ಸಾಗಾಟದ 38.53 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.

ಕಾಸರಗೋಡು ಮೂಲದ ಪ್ರಯಾಣಿಕ ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾನೆ. ಈತನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ ವೇಳೆ ಈ ಅಕ್ರಮ ಸಾಗಾಟದ ಚಿನ್ನ ಪತ್ತೆಯಾಗಿದೆ. ಈತ ಚಿನ್ನದ ಪೌಡರ್ ಅನ್ನು ಗಮ್ ನಲ್ಲಿ ಬೆರೆಸಿ ಅದನ್ನು ಉಂಡೆ ಮಾಡಿ ಗುದನಾಳದಲ್ಲಿ ಬಚ್ಚಿಟ್ಟ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಈತನಿಂದ 24 ಕ್ಯಾರೆಟ್ ಪರಿಶುದ್ಧತೆಯ 741 ಗ್ರಾಂ ತೂಕದ 38,53,200 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಚಿನ್ನ ಹಾಗೂ ಆರೋಪಿಯನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸಿ ಕಾನೂನು ಕ್ರಮ ಜರುಗಿಸಿದ್ದಾರೆ.

Edited By : Abhishek Kamoji
Kshetra Samachara

Kshetra Samachara

07/10/2022 09:18 am

Cinque Terre

6.69 K

Cinque Terre

0