ಉಳ್ಳಾಲ: ಮನೆ ಮುಂದೆ ನಿಲ್ಲಿಸಲಾಗಿದ್ದ ಕಾರೊಂದರ ಕೆಳಗಡೆ ನವಜಾತ ಗಂಡು ಶಿಶುವೊಂದು ಪತ್ತೆಯಾಗಿದ್ದು ಅಸ್ವಸ್ಥಗೊಂಡಿರುವ ಮಗುವಿಗೆ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ತೊಕ್ಕೊಟ್ಟು ಕಾಪಿಕಾಡುವಿನ ಗೇರು ಕೃಷಿ ಸಂಶೋಧನಾ ಕೇಂದ್ರ ರಸ್ತೆಯ ಅಂಬಿಕಾರೋಡ್ ನಿವಾಸಿ ಅಮರ್ ಎಂಬವರ ಮನೆ ಮುಂದಿನ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಸಂಬಂಧಿಕರ ಕಾರಿನ ಕೆಳಗಡೆ ನವಜಾತ ಶಿಶು ಪತ್ತೆಯಾಗಿದೆ. ನಿನ್ನೆ ಬೆಳಿಗ್ಗೆ ಅಮರ್ ಅವರು ಉಳ್ಳಾಲ ಶಾರದಾ ವಿಸರ್ಜನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ಹಿಂದಿರುಗಿದಾಗ ಪ್ರಕರಣ ಬೆಳಕಿಗೆ ಬಂದಿದೆ.ಅಮರ್ ಅವರು ತೀವ್ರ ಅಸ್ವಸ್ಥಗೊಂಡಿದ್ದ ಮಗುವನ್ನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಉಳ್ಳಾಲ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿದ್ದು ಮಗುವನ್ನ ಬಿಟ್ಟು ಹೋದ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
PublicNext
07/10/2022 04:18 pm