ಸುಳ್ಯ: ಸರ್ಕಾರಿ ಆಸ್ಪತ್ರೆ ಮುಂಭಾಗ ನಿಲ್ಲಿಸಿದ್ದ ಕಾರಿನಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ.
ಮೃತರನ್ನು ಪೆರಾಜೆ ನಿವಾಸಿ ಗೌರೀಶ್ (30) ಎಂದು ಗುರುತಿಸಲಾಗಿದೆ. ಗೌರೀಶ್ ಅವರು ಗುರುವಾರ ಸಂಜೆ ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿ ಕಾರು ನಿಲ್ಲಿಸಿದ್ದರು. ಕುಡಿತದ ಕಾರಣದಿಂದ ಮೃತಪಟ್ಟಿರಬೇಕೆಂದು ಶಂಕಿಸಲಾಗಿದೆ. ಈ ಬಗ್ಗೆ ಮಾಹಿತಿ ಅರಿತ ಸುಳ್ಯ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ.
Kshetra Samachara
09/10/2022 09:51 pm