ಬ್ರಹ್ಮಾವರ: ರಾಜ್ಯದ ಹೆಸರಾಂತ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಹೆಸರಿನಲ್ಲಿ ಕೊಡಮಾಡುವ ಪ್ರಶಸ್ತಿಯನ್ನು ಈ ಬಾರಿ ಕರಾವಳಿ ಮುಂಜಾವು ಪತ್ರಿಕೆಯ ಸಂಪಾದಕ ಗಂಗಾಧರ ಹಿರೇಗುತ್ತಿ ಅವರಿಗೆ ನೀಡಿ ಸನ್ಮಾನಿಸಲಾಯಿತು. ಬ್ರಹ್ಮಾವರದ ಬಂಟರ ಭವನದಲ್ಲಿ ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆದ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಮಾರಂಭದಲ್ಲಿ ಸಾಮಾಜಿಕ ಹೋರಾಟಗಾರ ಸುಧೀರ್ ಕುಮಾರ್ ಮರೋಳಿ, ಹಿರಿಯರಾದ ಅಂಬಾತನಯ ಮುದ್ರಾಡಿ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
13/10/2020 06:22 pm