ಮುಲ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ಮುಲ್ಕಿ ಬಸ್ ನಿಲ್ದಾಣ ಬಳಿ ಕೊರೊನಾ ಜಾಗೃತಿ ಬಗ್ಗೆ ದಾವಣಗೆರೆಯ ಶೃತಿ ಕಲಾಕೇಂದ್ರದ ವರಿಂದ ಬೀದಿನಾಟಕ ನಡೆಯಿತು. ಅಧ್ಯಕ್ಷತೆಯನ್ನು ಮುಲ್ಕಿಯ ವಿಶೇಷ ತಹಶೀಲ್ದಾರ್ ಮಾಣಿಕ್ಯ ಎನ್. ವಹಿಸಿ ಮಾತನಾಡಿ, ಕೊರೊನಾ ವಿರುದ್ಧ ಜಾಗೃತಿ ಮೂಡಿಸುವ ಸಂಘಟನೆಗಳ ಕಾರ್ಯ ಶ್ಲಾಘನೀಯ ಎಂದು ಹೇಳಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದ. ಕ. ಜಿಲ್ಲೆ ವಿಭಾಗದ ನಿರ್ದೇಶಕ ಸತೀಶ್ ಶೆಟ್ಟಿ ಮಾತನಾಡಿ, ಕೊರೊನಾ ವಿರುದ್ಧ ಜಾಗೃತಿ ಮೂಡಿಸಲು ಎಲ್ಲರೂ ಒಗ್ಗಟ್ಟಾಗಿ ಸ್ವಚ್ಛತೆ, ಪರಿಸರ ಕ್ಕೆ ಆದ್ಯತೆ ನೀಡಿ ಬೀದಿ ನಾಟಕದ ಮೂಲಕ ಪ್ರದರ್ಶಿಸುತ್ತಿದ್ದು ಎಲ್ಲರೂ ಸಹಕಾರ ನೀಡಬೇಕೆಂದು ವಿನಂತಿಸಿದರು.
ಮುಖ್ಯ ಅತಿಥಿಗಳಾಗಿ ಮುಲ್ಕಿ ನಪಂ ಮುಖ್ಯಾಧಿಕಾರಿ ಚಂದ್ರ ಪೂಜಾರಿ ಮಾತನಾಡಿ, ಮುಲ್ಕಿ ನಪಂ ವ್ಯಾಪ್ತಿಯಲ್ಲಿ ಕೊರೊನಾ ವಿರುದ್ಧ ಜಾಗೃತಿ ಮೂಡಿಸಲು ಈಗಾಗಲೇ ಹಲವಾರು ಸಂಘ-ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಕರಪತ್ರ ಮೂಲಕ ಜನಜಾಗೃತಿ ಮೂಡಿಸುವ ಕೆಲಸ ಆಗಿದೆ ಎಂದರು.
Kshetra Samachara
19/10/2020 12:32 pm