ಮಂಗಳೂರು: 65ನೇ ಕನ್ನಡ ರಾಜ್ಯೋತ್ಸವವನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ದ.ಕ. ಜಿಲ್ಲಾಡಳಿತ ಆಶ್ರಯದಲ್ಲಿ ನೆಹರೂ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶ ನೀಡಿದರು.
ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲೆಯ 38 ಮಂದಿ ಹಾಗೂ ಸೇವಾ ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರದಾನ ಮಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ , ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರುಗಳಾದ ಡಾ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಮೇಯರ್ ದಿವಾಕರ್ ಪಾಂಡೇಶ್ವರ್ , ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಪೊಲೀಸ್ ಆಯುಕ್ತರಾದ ವಿಕಾಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಮತ್ತಿತರ ಹಿರಿಯ, ಕಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
01/11/2020 11:32 am