ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಶಂಕರಪುರದ ಅನಿಲ್ ಕುಮಾರ್ ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಉಡುಪಿ: ಉದ್ಯಾವರದ ಸಂತ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ಅನಿಲ್ ಕುಮಾರ್ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಶಂಕರಪುರ ಶಿವಾನಂದನಗರದ ಅನಿಲ್ ಕುಮಾರ್ ರವರು ಬೆಂಗಳೂರಿನ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ (RUPSA)ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಅಕ್ಟೋಬರ್ 21ರಂದು ಬೆಂಗಳೂರಿನ ಜುಬಿಲಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪರವರ ಉಪಸ್ಥಿತಿಯಲ್ಲಿ ಪ್ರಶಸ್ತಿ ಸ್ವೀಕರಿಸಿದರು.

Edited By : PublicNext Desk
Kshetra Samachara

Kshetra Samachara

22/10/2024 03:09 pm

Cinque Terre

6.14 K

Cinque Terre

0

ಸಂಬಂಧಿತ ಸುದ್ದಿ