ಉಡುಪಿ: ಕೇಂದ್ರ ಮತ್ತು ರಾಜ್ಯ ಸರಕಾರದ ಭೂ ಮಸೂದೆ ಮತ್ತು ಕೃಷಿ ಕಾರ್ಮಿಕರಿಗೆ ಮಾರಕವಾದ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರುದ್ಧ ದೇಶದ ಪ್ರತಿ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಹಿ ಸಂಗ್ರಹ ಮಾಡುತ್ತಿದ್ದಾರೆ.
ಅದರಂತೆ ಉಡುಪಿ ಜಿಲ್ಲೆಯಲ್ಲಿ ಪ್ರತಿ ಗ್ರಾಮದಿಂದ ಸಂಗ್ರಹಿಸಿದ ಸಹಿ ಪ್ರತಿಯನ್ನು ವಿಭಿನ್ನ ರೀತಿಯಲ್ಲಿ ಬನ್ನಂಜೆಯಿಂದ ಕಡಿಯಾಳಿ ತನಕ ಸುಮಾರು 2 ಕಿ.ಮೀ. ದೂರದವರೆಗೆ ಸಹಿ ಸಂಗ್ರಹ ಪ್ರದರ್ಶನ ಮಾಡಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮ ನ. 17 ರಂದು ಹಮ್ಮಿಕೊಂಡಿದ್ದೇವೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದರು.
ಈ ಬಗ್ಗೆ ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅಶೋಕ್ ಕುಮಾರ್ , ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ಬದಿ ನಿಂತು ಸಹಿ ಸಂಗ್ರಹ ಬ್ಯಾನರನ್ನು ಸಾರ್ವಜನಿಕರಿಗೆ ಪ್ರದರ್ಶಿಸಲಿದ್ದಾರೆ. ಆ ಮೂಲಕ ರಾಜ್ಯ ಹಾಗೂ ರಾಷ್ಟ್ರದ ಬಿಜೆಪಿ ಸರ್ಕಾರದಿಂದ ಸಾರ್ವಜನಿಕರಿಗೆ ಆಗುವ ತೊಂದರೆ ಗಮನಕ್ಕೆ ತರಲಾಗುವುದು. ಬಳಿಕ ಸಹಿ ಸಂಗ್ರಹವನ್ನು ರಾಷ್ಟ್ರಪತಿಗಳ ಗಮನಕ್ಕೆ ತಂದು ರೈತ ವಿರೋಧಿ ಮಸೂದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಲಾಗುವುದು ಎಂದರು.
Kshetra Samachara
13/11/2020 03:17 pm