ಉಡುಪಿ: ಹಳ್ಳಿಗಳಲ್ಲಿ ಕೃಷಿಕರು ಕೃಷಿಯಿಂದ ವಿಮುಖವಾಗುತ್ತಿದ್ದಾರೆ. ಇಂತಹ ಸನ್ನಿವೇಶದಲ್ಲಿ ಕೃಷಿಕರಿಗೆ ಹಾಗೂ ಕೃಷಿ ಆಸಕ್ತರಿಗೆ ಕಡಿಮೆ ಖರ್ಚಿನಲ್ಲಿ ಸುಲಭದ ವೈಜ್ಞಾನಿಕ ಕೃಷಿ, ಹೈನುಗಾರಿಕೆ, ವಿಭಿನ್ನ ಕೃಷಿ ಬೆಳೆಗಳು, ಯಾಂತ್ರೀಕರಣ ವಿಷಯಗಳನ್ನು ಜಿಲ್ಲೆಯಲ್ಲಿ ಗ್ರಾಮ ಸಮಿತಿಗಳ ಮೂಲಕ ಕೃಷಿ ತಜ್ಞರು ವಿಜ್ಞಾನಿಗಳಿಂದ ಪ್ರಾತ್ಯಕ್ಷಿಕೆ ಸಹಿತ ಮಾಹಿತಿ ಮಾರ್ಗದರ್ಶನ ನೀಡುತ್ತಿರುವ ಉಡುಪಿ ಜಿಲ್ಲಾ ಕೃಷಿಕ ಸಂಘವು ಆಯೋಜಿಸಿರುವ ಜಿಲ್ಲಾ ರೈತ ಸಮಾವೇಶ-2022, ಮಾ. 6. ರಂದು ಉಡುಪಿ ಕುಂಜಿಬೆಟ್ಟು ಶ್ರೀ ಶಾರದಾ ಮಂಟಪ ಆವರಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕೃಷಿಕ ಸಂಘದ ಪದಾಧಿಕಾರಿಗಳು ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ,ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಉದ್ಘಾಟಿಸಲಿದ್ದಾರೆ.
ಅಂದು ಮಧ್ಯಾಹ್ನ 1 ಗಂಟೆಯಿಂದ ಕೃಷಿ ವಿಚಾರಗೋಷ್ಠಿಗಳು ನಡೆಯಲಿವೆ. ಉತ್ತಮ ಗೇರು ತಳಿಗಳು ಮತ್ತು ಬೆಳೆ ತಾಂತ್ರಿಕತೆ ಬಗ್ಗೆ ಬ್ರಹ್ಮಾವರ ವಲಯ ಕೃಷಿ & ತೋಟಗಾರಿಕಾ ಸಂಶೋಧನಾ ಕೇಂದ್ರದ ಅಧಿಕಾರಿಗಳು ಮಾಹಿತಿ ನೀಡಲಿದ್ದಾರೆ ಎಂದರು.
Kshetra Samachara
28/02/2022 07:01 pm