ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ರಾಜ್ಯಮಟ್ಟದ ಕೃಷಿ ಮೇಳಕ್ಕೆ "ಕೃಷಿಸಿರಿ 2022"ಕ್ಕೆ ಕ್ಷಣಗಣನೆ

ಮುಲ್ಕಿ: ಮುಲ್ಕಿ ಸಮೀಪದ ಕೊಲ್ನಾಡುವಿನಲ್ಲಿ ರಾಜ್ಯಮಟ್ಟದ ಕೃಷಿ ಮೇಳಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಾರ್ಚ್ 11ರಿಂದ 13ರವರೆಗೆ ಕೃಷಿ ಸಿರಿ-2022 ನಡೆಯಲಿದೆ.

ಕೃಷಿ ಮೇಳದಲ್ಲಿ ಕೃಷಿ ಕುರಿತ ಮಾಹಿತಿ, ಗೋಷ್ಠಿ, ಸಂವಾದದ ಜೊತೆಗೆ ಮೇಳಕ್ಕೆ ಬರುವವರಿಗೆ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಮಕ್ಕಳು, ಮಹಿಳೆಯರಿಗೆ ಮನೋರಂಜನೆ ವ್ಯವಸ್ಥೆ ಮಾಡಲಾಗಿದೆ. ಕೃಷಿ ಮೇಳದಲ್ಲಿ ತುಳುನಾಡಿನ ಕೃಷಿ ಹಿನ್ನೆಲೆಯ ಜನರ ಬದುಕನ್ನು ಸಾದರಪಡಿಸುವ ಪಾರಂಪರಿಕ ಗ್ರಾಮ ಜನರನ್ನು ಆಕರ್ಷಿಸುತ್ತಿದೆ. ಮಂಗಳೂರು ವಿಶ್ವವಿದ್ಯಾನಿಲಯ ಪ್ರಾಯೋಜಿತ ಪಾರಂಪರಿಕ ಗ್ರಾಮದಲ್ಲಿ ಕೃಷಿಕರ ಮನೆಗಳು, ಪರಿಸರವನ್ನು ಕಲಾವಿದರ ಕೈಚಳಕದಲ್ಲಿ ಪಡಿಮೂಡಿಸಲಾಗಿದೆ.

ಕೃಷಿ ಮೇಳ ನಡೆಯುವ ಸ್ಥಳದಲ್ಲಿ ಪಾರ್ಕಿಂಗ್ ಅಚ್ಚುಕಟ್ಟಾಗಿ ನಡೆಯಲಿದ್ದು ಇಂದು ಮಂಗಳೂರಿನ ಎಸಿಪಿ ಮಹೇಶ್ ಕುಮಾರ್ ಮುಲ್ಕಿ ಠಾಣಾ ಇನ್ಸ್‌ಪೆಕ್ಟರ್ ಕುಸುಮಾಧರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೃಷಿಮೇಳವನ್ನು ಯಶಸ್ವಿಗೊಳಿಸುವಂತೆ ಪದಾಧಿಕಾರಿ ವಿನೋದ್ ಸಾಲ್ಯಾನ್ ಬೆಳ್ಳಾಯರು ನಾಗರಿಕರಲ್ಲಿ ವಿನಂತಿಸಿದ್ದಾರೆ.

Edited By :
Kshetra Samachara

Kshetra Samachara

10/03/2022 05:27 pm

Cinque Terre

11.13 K

Cinque Terre

0

ಸಂಬಂಧಿತ ಸುದ್ದಿ