ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ವಿಶ್ವ ಜನಸಂಖ್ಯಾ ದಿನಾಚರಣೆ, ಆರೋಗ್ಯ ಸಿಬ್ಬಂದಿಗೆ ಅಭಿನಂದನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಇಲಾಖೆ ಮತ್ತು ಸರಕಾರಿ ವೆನ್ಲಾಕ್ ಹಾಗೂ ಲೇಡಿಗೋಶನ್ ಆಸ್ಪತ್ರೆ ವತಿಯಿಂದ‌ ಜಿಲ್ಲಾ ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ ನಗರದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.

ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ‌.ಸಂಧ್ಯಾ ದೀಪ ಬೆಳಗಿಸಿ ಉದ್ಘಾಟಿಸಿದರು. ಇದೇ ಸಂದರ್ಭ ಆರೋಗ್ಯ ಕ್ಷೇತ್ರದಲ್ಲಿ ಸಾಧನೆಗೈದ ಸಿಬ್ಬಂದಿಗಳನ್ನು ಗುರುತಿಸಿ ಅಭಿನಂದಿಸಲಾಯಿತು‌. ಕೋವಿಡ್ ಜಾಗೃತಿ ಸಲುವಾಗಿ ಡಾ. ಜಗದೀಶ್ ಪ್ರತಿಜ್ಞಾ ವಿಧಿ ಬೋಧಿಸಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯರಿ, ವೆನ್ಲಾಕ್ ವೈದ್ಯಕೀಯ ಅಧೀಕ್ಷಕ ಡಾ.ಸದಾಶಿವ ಶಾನುಭಾಗ್, ಲೇಡಿಗೋಶನ್ ವೈದ್ಯಕೀಯ ಅಧೀಕ್ಷಕ ಡಾ.ದುರ್ಗಾಪ್ರಸಾದ್, ವಾರ್ತಾಧಿಕಾರಿ ಮಂಜುನಾಥ್ ಮೊದಲಾದವರು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

12/11/2020 11:36 am

Cinque Terre

6.38 K

Cinque Terre

0

ಸಂಬಂಧಿತ ಸುದ್ದಿ