ಮುಲ್ಕಿ: ಮುಲ್ಕಿಯ ಹೊಸ ಅಂಗಣ ಪ್ರಕಟಣಾಲಯ ವತಿಯಿಂದ ಸಂಪಾದಕ ಡಾ. ಹರಿಶ್ಚಂದ್ರ ಸಾಲ್ಯಾನ್ ಅವರ "ತುಳುನಾಡಿನ ಕಟ್ಟುಕಟ್ಟಳೆ ಗಳು" ಕೃತಿ ಬಿಡುಗಡೆ ನಡೆಯಿತು. ಅಧ್ಯಕ್ಷತೆಯನ್ನು ಮುಲ್ಕಿ-ಮೂಡಬಿದ್ರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ವಹಿಸಿದ್ದರು. ಕೃತಿಯನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ಬಿಡುಗಡೆ ಮಾಡಿ ಮಾತನಾಡಿ, ಯುವ ಜನಾಂಗ ಹಿರಿಯರ ಪರಂಪರೆ ಅನುಸರಿಸಿಕೊಂಡು ಹೋಗುವ ಚಿಂತನೆ ಮಾಡಬೇಕು. ಈ ನಿಟ್ಟಿನಲ್ಲಿ ಕೃತಿಕಾರ ಡಾ. ಹರಿಶ್ಚಂದ್ರ ಸಾಲ್ಯಾನ್ ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದರು.
ಮುಖ್ಯ ಅತಿಥಿ ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ, ತುಳುನಾಡಿನ ಪರಂಪರೆ ತಿಳಿಸಿ ಸಂಸ್ಕೃತಿ ಉಳಿಸುವ ಕೆಲಸ ಮಾಡುತ್ತಿರುವುದು ನಮ್ಮ ಹೆಮ್ಮೆ ಎಂದರು. ಮುಲ್ಕಿ ನ. ಪಂ. ಅಧ್ಯಕ್ಷ ಸುಭಾಷ್ ಶೆಟ್ಟಿ, ಉಪಾಧ್ಯಕ್ಷ ಸತೀಶ್ ಅಂಚನ್, ಕಸಾಪ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಎಂ., ದ.ಕ.ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಕಿನ್ನಿಗೋಳಿ ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ರಮೇಶ್ ಕೊಕ್ಕರಕಲ್, ಹೊಸ ಅಂಗಣ ಮಾಸಿಕ ಪತ್ರಿಕೆ ಸಂಪಾದಕ ಡಾ. ಹರಿಶ್ಚಂದ್ರ ಪಿ. ಸಾಲ್ಯಾನ್, ಮುಲ್ಕಿ ರೋಟರಿ ಕ್ಲಬ್ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಮುಲ್ಕಿ ವಿಜಯ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ಉಪಸ್ಥಿತರಿದ್ದರು. ದಯಾ ಮಣಿ ಎಸ್. ಶೆಟ್ಟಿ ಎಕ್ಕಾರು ಕೃತಿ ಪರಿಚಯಿಸಿದರು. ರವಿಚಂದ್ರ ಸ್ವಾಗತಿಸಿದರು. ವಿಜಯಕುಮಾರ್ ಕುಬೆವೂರು ನಿರೂಪಿಸಿದರು. ವಾಮನ್ ನಡಿಕುದ್ರು ವಂದಿಸಿದರು.
Kshetra Samachara
15/11/2020 04:09 pm