ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ 'ಯಕ್ಷಗಾನ ಮತ್ತು ಬ್ಯಾರಿ ಸಂಬಂಧ' ಕುರಿತ ವಿಚಾರ ಸಂಕಿರಣ ತುಳು ಸಾಹಿತ್ಯ ಅಕಾಡೆಮಿಯ ತುಳು ಭವನದಲ್ಲಿ ಶುಕ್ರವಾರ ನಡೆಯಿತು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್ ಸಾರ್ ಉದ್ಘಾಟಿಸಿದರು. ಬ್ಯಾರಿ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ. ‘ಬೆಲ್ಕಿರಿ’ ದ್ವೈಮಾಸಿಕ ಸಂಚಿಕೆ ಬಿಡುಗಡೆಗೊಳಿಸಿದರು. ಸಾಹಿತಿ ಅಬ್ದುಲ್ ರಹ್ಮಾನ್ ಕುತ್ತೆತ್ತೂರು ಅತಿಥಿಯಾಗಿದ್ದರು. ಇದೇ ವೇಳೆ ಯಕ್ಷಗಾನ ಕಲಾವಿದರಾದ ಜಬ್ಬಾರ್ ಸಮೋ ಅವರನ್ನು ಸನ್ಮಾನಿಸಲಾಯಿತು. ನಂತರ ಸಮೋ ಅವರು 'ಯಕ್ಷಗಾನ ಮತ್ತು ಬ್ಯಾರಿ ಸಂಬಂಧ' ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಬ್ಯಾರಿ ಅಕಾಡೆಮಿ ಸದಸ್ಯರಾದ ಚಂಚಲಾಕ್ಷಿ, ಸುರೇಖಾ ಉಪಸ್ಥಿತರಿದ್ದರು. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಪೂರ್ಣಿಮಾ ಸ್ವಾಗತಿಸಿದರು. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯ ಶಂಶೀರ್ ಬುಡೋಳಿ ನಿರೂಪಿಸಿದರು.
Kshetra Samachara
21/11/2020 04:38 pm