ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡುಬಿದಿರೆ: ವರ್ಧಮಾನ ಸಾಹಿತ್ಯ ಪ್ರಶಸ್ತಿ ಪ್ರದಾನ

ಮೂಡುಬಿದಿರೆ: ವರ್ಧಮಾನ ಪ್ರಶಸ್ತಿ ಪೀಠ ಮೂಡುಬಿದಿರೆ ಇದರ ನಲುವತ್ತನೇ ವರುಷದ (2019ರ ಸಾಲಿನ) ವರ್ಧಮಾನ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ಮಂಗಳವಾರ ಸಮಾಜಮಂದಿರದಲ್ಲಿ ನಡೆಯಿತು.ಬೆಳಗಾವಿಯ ಡಾ.ಬಾಳಾಸಾಹೇಬ ಲೋಕಾಪುರ ಅವರಿಗೆ ವರ್ಧಮಾನ ಸಾಹಿತ್ಯ ಪ್ರಶಸ್ತಿ, ರಾಯಚೂರಿನವರಾದ ಡಾ.ರಾಜಶೇಖರ ಹಳೆಮನೆ ಅವರಿಗೆ ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಶ್ರೀ ಜೈನ ಮಠದ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು.ಪ್ರಶಸ್ತಿ ಪೀಠದ ಕಾರ್ಯಾಧ್ಯಕ್ಷ ಎಸ್.ಡಿ. ಸಂಪತ್ ಸಾಮ್ರಾಜ್ಯ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಶಸ್ತಿ ಪೀಠದ ಪ್ರಧಾನ ನಿರ್ದೇಶಕ ಡಾ. ನಾ. ಮೊಗಸಾಲೆ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಸಹನಿರ್ದೇಶಕ ನಿರಂಜನ ಕುಮಾರ್ ಶೆಟ್ಟಿ ಪ್ರಶಸ್ತಿ ಪತ್ರಗಳನ್ನು ವಾಚಿಸಿದರು. ಕೋಶಾಧಿಕಾರಿ ಶ್ರೀಪಾಲ್ ಎಸ್. ಸಂದೇಶ ವಾಚಿಸಿದರು. ಸಹ ಕಾರ್ಯದರ್ಶಿ ನೇಮಿರಾಜ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಸದಾನಂದ ನಾರಾವಿ ವಂದಿಸಿದರು.

Edited By : Manjunath H D
Kshetra Samachara

Kshetra Samachara

25/11/2020 07:24 am

Cinque Terre

22.32 K

Cinque Terre

0

ಸಂಬಂಧಿತ ಸುದ್ದಿ