ಮುಲ್ಕಿ: ಮುಲ್ಕಿ ಸಮೀಪದ ಅತಿಕಾರಿಬೆಟ್ಟು ಗ್ರಾಮ ಪಂಚಾಯಿತಿಯಲ್ಲಿ ಸಂವಿಧಾನ ದಿನ ಆಚರಣೆ ಪ್ರಯುಕ್ತ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಈ ಸಂದರ್ಭ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಮಾತನಾಡಿ, ಅಂಬೇಡ್ಕರ್ ಅವರು ಸಮಾಜದ ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರರಾಗಿದ್ದು, ಅವರ ತತ್ವಗಳನ್ನು ಅನುಸರಿಸಿ ಇಂದಿನ ಯುವ ಜನಾಂಗ ರಾಷ್ಟ್ರಕ್ಕೆ ಮಾದರಿಯಾಗಬೇಕು ಎಂದರು. ಈ ಸಂದರ್ಭ ಅತಿಕಾರಿ ಬೆಟ್ಟು ಪಂಚಾಯತ್ ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ ಯೋಗೇಶ್, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮೈಲೊಟ್ಟು ಮುಖ್ಯ ಶಿಕ್ಷಕರಾದ ಹೇಮಲತಾ,ಮೈಲೊಟ್ಟು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಮಮತಾ ಹಾಗೂ ಗ್ರಾಪಂ ಸಿಬ್ಬಂದಿ ಹಾಜರಿದ್ದರು.
Kshetra Samachara
27/11/2020 10:20 am