ಉಡುಪಿ: ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ನೂತನವಾಗಿ ಅಳವಡಿಸಲಾದ ಆಕ್ಸಿಜನ್ ಟ್ಯಾಂಕ್ ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಇಂದು ಚಾಲನೆ ನೀಡಿದರು.ಕೋವಿಡ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಮನಗಂಡು ಹೊಸದಾಗಿ ದ್ರವ ರೂಪದ ಅಮ್ಲಜನಕ ಶೇಖರಣಾ ಘಟಕ ನಿರ್ಮಾಣ ಮಾಡಲಾಗಿತ್ತು. ಜಿಲ್ಲಾ ಆಸ್ಪತ್ರೆಯ ಸಮೀಪದಲ್ಲೇ 50 ಲಕ್ಷ ವೆಚ್ಚದಲ್ಲಿ 6000 ಸಾವಿರ ಲೀಟರ್ ಸಾಮರ್ಥ್ಯದ ಘಟಕ ನಿರ್ಮಾಣ ಮಾಡಲಾಗಿದೆ.ಇಂದು ಜಿಲ್ಲೆಗೆ ಆಗಮಿಸಿದ ಗೃಹ ಸಚಿವರು ನೂತನ ಘಟಕಕ್ಕೆ ಚಾಲನೆ ನೀಡಿದರು. ಉಡುಪಿ ಜಿಲ್ಲೆಯ ಜನತೆಗೆ ಈ ಘಟಕ ವರದಾನವಾಗಿ ಪರಿಣಮಿಸಲಿದೆ ಎಂದು ಸಚಿವರು ತಿಳಿಸಿದರು. ಜಿಲ್ಲಾ ವೈದ್ಯಾಧಿಕಾರಿ ಸುಧೀರ್ ಚಂದ್ರ ಸೂಡ, ಶಾಸಕರಾದ ರಘುಪತಿ ಭಟ್ , ಲಾಲಾಜಿ ಮೆಂಡನ್ ಉಪಸ್ಥಿತರಿದ್ದರು.
Kshetra Samachara
03/12/2020 04:19 pm