ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಡುಬಿದ್ರಿ: "ಡಾ.ಬಿ.ಆರ್ . ಅಂಬೇಡ್ಕರ್ ಅವರ ತತ್ವಾದರ್ಶ ಜೀವನದಲ್ಲಿ ಅಳವಡಿಸಿ ಕೊಳ್ಳೋಣ"

ಪಡುಬಿದ್ರಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 64ನೇ ಮಹಾ ಪರಿನಿರ್ವಾಣ ದಿನಾಚರಣೆ ಅಂಗವಾಗಿ ಕಾಪು ತಾಲೂಕು ಅಂಬೇಡ್ಕರ್ ಯುವಸೇನೆ ವತಿಯಿಂದ ಪಡುಬಿದ್ರಿ ಪೇಟೆಯಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕಾಪು ತಾಲೂಕು ಅಂಬೇಡ್ಕರ್ ಯುವ ಸೇನೆ ಅಧ್ಯಕ್ಷ ಲೋಕೇಶ್ ಪಡುಬಿದ್ರಿ ಮಾತನಾಡಿ,ಅಂಬೇಡ್ಕರ್ ಅವರು ನಿಧನರಾಗಿ ಇಂದಿಗೆ 64 ವರ್ಷಗಳು ಗತಿಸಿದವು. ಈ ದಿನವನ್ನು ದೇಶಾದ್ಯಂತ ಮಹಾಪರಿನಿರ್ವಾಣ ದಿನವನ್ನಾಗಿ ಆಚರಿಸಲಾಗುತ್ತದೆ.

ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ತಮ್ಮ ಜೀವನದುದ್ದಕ್ಕೂ ಅಸ್ಪೃಶ್ಯತೆ, ಜಾತಿ ಪದ್ಧತಿ, ಲಿಂಗಭೇದ, ಅಸಮಾನತೆ ವಿರುದ್ಧ ಹೋರಾಡಿ ಶೋಷಿತ ಸಮುದಾಯದ ಏಳ್ಗೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಅವರಿಗೆ ಕೇವಲ ಪೂಜೆ ಸಲ್ಲಿಸಿದರೆ ಸಾಲದು, ನಾವು ಅವರ ತತ್ವಾದರ್ಶ, ಸಿದ್ಧಾಂತ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು.

ಉದ್ಯಮಿ ಸಂತೋಷ್ ಶೆಟ್ಟಿ ಪಡುಬಿದ್ರಿ, ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷ ಕೇಶವ ಸಾಲ್ಯಾನ್,ಯುವ ಸೇನೆ ಕಾರ್ಯದರ್ಶಿ ವಸಂತ ಸಾಲ್ಯಾನ್,ಮಹಿಳಾ ಘಟಕದ ಅಧ್ಯಕ್ಷೆ ರಾಜೀವಿ,ಗ್ರಾಮ ಶಾಖೆಯ ಪ್ರಮೀಳಾ ಮೊದಲಾದವರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

07/12/2020 09:59 am

Cinque Terre

13.27 K

Cinque Terre

0

ಸಂಬಂಧಿತ ಸುದ್ದಿ