ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಪತ್ರಕರ್ತ, ನಿವೃತ್ತ ಪ್ರಾಚಾರ್ಯ ದಾಮೋದರ ಐತಾಳರಿಗೆ ಶ್ರದ್ಧಾಂಜಲಿ

ಉಡುಪಿ: ಅನೇಕ ವರ್ಷಗಳ ಕಾಲ ನಾಡಿನ‌ ವಿವಿಧ ಶಿಕ್ಷಕ ತರಬೇತಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ, ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಹಿರಿಯ ಪತ್ರಕರ್ತ ದಾಮೋದರ್ ಐತಾಳ್ ನಿಧನಕ್ಕೆ ಉಡುಪಿ ಪ್ರೆಸ್ ಕ್ಲಬ್ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಹಿರಿಯ ಪತ್ರಕರ್ತ ಕಿರಣ್ ಮಂಜನಬೈಲು, ದಿ. ದಾಮೋದರ ಐತಾಳ್ ಅವರಿಗೆ ನುಡಿನಮನ ಸಲ್ಲಿಸಿದರು. ಬಳಿಕ ಪತ್ರಕರ್ತರು ಮೌನ‌ ಪ್ರಾರ್ಥನೆ ನಡೆಸಿ ಗೌರವ ಸಲ್ಲಿಸಿದರು.

ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರೂ ಆಗಿದ್ದ ದಾಮೋದರ ಐತಾಳ್ ಬಳಕೆದಾರರ ವೇದಿಕೆ ವಿಶ್ವಸ್ಥ, ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪ್ರತಿಷ್ಠಿತ ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಸ್ಥಾಪನೆಗೆ ಶ್ರಮಿಸಿದ್ದ ಸಾಮಾಜಿಕ ಧುರೀಣರೂ ಹೌದು ಅವರ ನಿಧನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ಸೂಚಿಸಿದ್ದಾರೆ.

Edited By : Manjunath H D
Kshetra Samachara

Kshetra Samachara

08/12/2020 05:20 pm

Cinque Terre

7.19 K

Cinque Terre

0

ಸಂಬಂಧಿತ ಸುದ್ದಿ