ದಕ್ಷಿಣ ಕನ್ನಡ ಜಿಲ್ಲಾ ಪದ್ಮಶಾಲಿ ಮಹಾಸಭಾ ಅಮೃತ ಮಹೋತ್ಸವ ಸಮಿತಿ ಹಾಗೂ ಪದ್ಮಶಾಲಿ ಮಹಾಸಭಾ (ರಿ) ವತಿಯಿಂದ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆ ವ್ಯಾಪ್ತಿಯ ಸಮಾಜ ಬಾಂಧವರ ಅಮೃತ ಸಂಭ್ರಮ 2022 ಕಾರ್ಯಕ್ರಮ ಮುಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಎದುರು ಭಾಗದ ಬೃಹತ್ ವೇದಿಕೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಆಧುನಿಕ ಯುಗದಲ್ಲಿ ಶಿಕ್ಷಣದ ಮೂಲಕ ಎಲ್ಲಾ ಸಮುದಾಯದವರು ತಮ್ಮ ಕನಸನ್ನು ಸಾಕಾರ ಗೊಳಿಸಲು ಸಾಧ್ಯವಿದೆ. ಪದ್ಮಶಾಲಿ ಸಮುದಾಯದವರು ಸಂಘಟನೆಯ ಮೂಲಕ ಸಾಧಕರನ್ನು ಗುರುತಿಸಿ ಗೌರವಿಸುವಂತಹ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಕಟೀಲು ಕ್ಷೇತ್ರದ ಅರ್ಚಕ ವೇಮೂ ಲಕ್ಷ್ಮಿನಾರಾಯಣ ಆಸ್ರಣ್ಣ ಆಶೀರ್ವಚನ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಪದ್ಮಶಾಲಿ ಸಭಾ ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಪುರಂದರ ಡಿ ಶೆಟ್ಟಿಗಾರ್ ಕಿನ್ನಿಗೋಳಿ ವಹಿಸಿದ್ದರು.
ಕಾರ್ಯಕ್ರಮಕ್ಕೆ ಮೊದಲು ಡಾ.ವೀರೇಂದ್ರ ಹೆಗ್ಗಡೆಯವರು ಭವ್ಯವಾದ ಮೆರವಣಿಗೆಯಲ್ಲಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಡಾ.ಹೆಗ್ಗಡೆಯವರನ್ನು ಗೌರವಿಸಲಾಯಿತು.
PublicNext
27/08/2022 05:08 pm