ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಶಕ್ತಿ ಕೇಂದ್ರ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಜಿಲ್ಲಾ ಮಟ್ಟದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ನಡೆಯಿತು‌.

ನಿಟ್ಟೂರಿನ ಬಾಲಕಿಯರ ಬಾಲಮಂದಿರದಲ್ಲಿ ಕಾರ್ಯಕ್ರಮವನ್ನು ಪುಟಾಣಿ ಮಕ್ಕಳೊಂದಿಗೆ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರೊನಾಲ್ಡ್ ಫುರ್ಟಾಡೋ ಅವರು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.ಮಕ್ಕಳ ಬಾಯಿಗೆ ಜೇನುತುಪ್ಪ ಹಾಕುವ ಮೂಲಕ ವಿಶಿಷ್ಟವಾಗಿ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಆರ್ . ಶೇಷಪ್ಪ ಮಾತನಾಡಿ, ಮಕ್ಕಳ ರಕ್ಷಣೆ ಪೋಷಣೆ ಹಾಗೂ ಸರ್ಕಾರದ ಯೋಜನೆ ಅನುಷ್ಠಾನಗೊಳಿಸುವ ಮೂಲಕ ಹೆಣ್ಣು ಮಕ್ಕಳನ್ನು ಮುಖ್ಯವಾಹಿನಿಗೆ ತರಲಾಗುವುದೆಂದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸದಾನಂದ ನಾಯಕ್ ಮಾತನಾಡಿ ಮಕ್ಕಳ ಆರೋಗ್ಯ, ಶಿಕ್ಷಣ,ಪೌಷ್ಟಿಕತೆ, ಬಾಲ್ಯವಿವಾಹ ಇತ್ಯಾದಿ ಕಾಯ್ದೆ ಬಗ್ಗೆ ಅರಿವು ಮೂಡಿಸಿದರು. ಚಂದ್ರಿಕಾ ಎಸ್. ನಾಯಕ್ , ಸುಮತಿ,ರಾಮಚಂದ್ರ ಉಪಾಧ್ಯ , ದೀಪಾ ಕಾನೂನು ಪರಿವೀಕ್ಷಣಾಧಿಕಾರಿ ಮತ್ತಿತರರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

24/01/2021 01:47 pm

Cinque Terre

9.31 K

Cinque Terre

1

ಸಂಬಂಧಿತ ಸುದ್ದಿ