ಉಡುಪಿ: "ಮಾತಾಡ್ ಮಾತಾಡ್ ಕನ್ನಡ... ಕನ್ನಡಕ್ಕಾಗಿ ನಾವು" ಕರ್ನಾಟಕ ರಾಜ್ಯೋತ್ಸವ ಅಭಿಯಾನದ ಅಂಗವಾಗಿ ವಿಶ್ವದಾದ್ಯಂತ ಏಕಕಾಲದಲ್ಲಿ ಲಕ್ಷ ಲಕ್ಷ ಕಂಠಗಳಲ್ಲಿ ಕನ್ನಡ ಗೀತಗಾಯನ ಇಂದು ನಡೆಯುತ್ತಿದೆ.
ಈ ಪ್ರಯುಕ್ತ ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆಯ ಕೇದಾರೋತ್ಥಾನ ಟ್ರಸ್ಟ್ ವತಿಯಿಂದ ಕಡೆಕಾರ್ ಗ್ರಾಪಂ ವ್ಯಾಪ್ತಿಯಲ್ಲಿ ಹಡಿಲು ಭೂಮಿ ಕೃಷಿ ಮಾಡಲಾಗಿದ್ದು, ಇಂದು ಆ ಸ್ಥಳದಲ್ಲಿ ಭತ್ತದ ಪೈರಿನ ಕಟಾವಿನ ಸಂದರ್ಭ 3 ಹಾಡುಗಳನ್ನು ಶಾಲಾ- ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು, ಕೇದಾರೋತ್ಥಾನ ಟ್ರಸ್ಟಿನ ಪದಾಧಿಕಾರಿಗಳು ಹಾಡಿದರು.
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ, ಕೇದಾರೋತ್ಥಾನ ಟ್ರಸ್ಟಿನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಕಪ್ಪೆಟ್ಟು ಪ್ರವೀಣ್ ಶೆಟ್ಟಿ, ಜಿಪಂ ಮಾಜಿ ಅಧ್ಯಕ್ಷ ದಿನಕರ್ ಬಾಬು, ನಗರಾಭಿವೃದ್ಧಿ ಪ್ರಾಧಿಕಾರ ಸದಸ್ಯ ಕಿಶೋರ್ ಕರಂಬಳ್ಳಿ, ಮುಕುಂದ ಕೃಪಾ ಶಾಲೆ ಅಧ್ಯಾಪಕಿ ಸುಜಾತಾ ಶೆಟ್ಟಿ, ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.
Kshetra Samachara
28/10/2021 02:02 pm