ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ವಿಶಿಷ್ಟವಾಗಿ ಶಾಲಾ ಪ್ರಾರಂಭೋತ್ಸವ ನಡೆಯಿತು.ಇಲ್ಲಿನ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸರಸ್ವತಿ ದೇವಿಯ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಮೆರವಣಿಗೆ ಮಾಡಲಾಯಿತು.
ಈ ಮೂಲಕ ಶಾಲೆಗೆ ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳಲಾಯಿತು. ದೇವಿಯ ಮೂರ್ತಿ ಪಲ್ಲಕ್ಕಿಯಲ್ಲಿ ಸಾಗಿ ಬರುತ್ತಿದ್ದಂತೆ ವಿದ್ಯಾರ್ಥಿಗಳು ಕಲಶ ಪುಸ್ತಕಗಳನ್ನು ಹೊತ್ತು ಶಾಲೆಗೆ ಬಂದರು.
ವಿದ್ಯಾರ್ಥಿನಿಯೋರ್ವಳು ಶಾರದಾದೇವಿಯ ವೇಷಭೂಷಣದಲ್ಲಿ ಬಂದು ಗಮನ ಸಳೆದಿದ್ದಾಳೆ. ಶಿಕ್ಷಕರು ಮತ್ತು ಶಾಲೆಯ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಸಿಹಿತಿಂಡಿ ಹಂಚಿದರು.
Kshetra Samachara
16/05/2022 08:06 pm