ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ದಸರಾದ ನಾಲ್ಕು ಹೆಚ್ಚುವರಿ ರಜೆ ದ.ಕ.ಜಿಲ್ಲೆಗೂ ವಿಸ್ತರಣೆ: ಡಿಸಿ ಆದೇಶ

ಮಂಗಳೂರು: ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಈ ಹಿಂದೆ ಮಂಗಳೂರು ತಾಲೂಕು ವ್ಯಾಪ್ತಿಯ ಶಾಲೆಗಳಿಗೆ ಅನ್ವಯವಾಗುವಂತೆ ಸೆ.28 ರಿಂದ ಅಕ್ಟೋಬರ್ 1ರವರೆಗೆ ನೀಡಲಾಗಿರುವ ಹೆಚ್ಚುವರಿ 4 ದಿನಗಳ ರಜೆಯನ್ನು ದ.ಕ.ಜಿಲ್ಲಾ ವ್ಯಾಪ್ತಿಗೆ ವಿಸ್ತರಿಸಿ ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಆದೇಶಿಸಿದ್ದಾರೆ.

ರಾಜ್ಯದ ಎಲ್ಲಾ ಶಾಲೆಗಳಿಗೆ ಶೈಕ್ಷಣಿಕ ಮಾರ್ಗಸೂಚಿಯಂತೆ ಅಕ್ಟೋಬರ್ 3 ರಿಂದ ಅಕ್ಟೋಬರ್ 16ರವರೆಗೆ ದಸರಾ ರಜೆಯನ್ನು ನೀಡುವುದಾಗಿ ನಿಗದಿಪಡಿಸಲಾಗಿದೆ. ಆದರೆ ದಸರಾ ಹಬ್ಬವು ಸೆ.26ರಿಂದ ಆರಂಭಗೊಳ್ಳುತ್ತಿದ್ದು, ಮಂಗಳೂರು ದಸರಾ ಹಿನ್ನೆಲೆಯಲ್ಲಿ ಅಂದಿನಿಂದಲೇ ರಜೆ ನೀಡುವಂತೆ ಪೋಷಕರು, ಜನಪ್ರತಿನಿಧಿಗಳು ಸರಕಾರಕ್ಕೆ ಮನವಿ ಮಾಡಿದ್ದರು. ಅದಕ್ಕೆ ಶಿಕ್ಷಣ ಸಚಿವರು ಪೂರಕವಾಗಿ ಸ್ಪಂದಿಸಿದ್ದರೂ ರಾಜ್ಯ ಸರಕಾರವು ಶುಕ್ರವಾರ ಪರಿಷ್ಕೃತ ಆದೇಶ ಹೊರಡಿಸಿ ಮಂಗಳೂರು ತಾಲೂಕು ವ್ಯಾಪ್ತಿಯ ಎಲ್ಲಾ ಶಾಲೆಗಳಿಗೆ ಸೆ.28 ರಿಂದ ಅಕ್ಟೋಬರ್ 1 ರವರೆಗೆ ರಜೆಯನ್ನು ಘೋಷಿಸಿತ್ತು. ಇದೀಗ ಅದನ್ನು ದ.ಕ.ಜಿಲ್ಲೆಗೆ ವಿಸ್ತರಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಆದರೆ ಅಕ್ಟೋಬರ್ 2ಂದು ಕಡ್ಡಾಯವಾಗಿ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಆಯೋಜಿಸುವಂತೆ ಸೂಚಿಸಲಾಗಿದೆ. ಅಲ್ಲದೆ ವಿದ್ಯಾರ್ಥಿಗಳಿಗೆ ನೀಡಲಾದ ಈ ನಾಲ್ಕು ಹೆಚ್ಚುವರಿ ರಜೆಗಳನ್ನು ನವೆಂಬರ್ ತಿಂಗಳಿನ ನಾಲ್ಕು ಶನಿವಾರ ಪೂರ್ಣ ದಿನದ ತರಗತಿ ಮತ್ತು ಎರಡು ರವಿವಾರ ಪೂರ್ಣ ಶಾಲಾ ಕೆಲಸದ ದಿನಗಳಾಗಿ ನಡೆಸಿ ರಜೆಯನ್ನು ಸರಿದೂಗಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ .

Edited By : Nirmala Aralikatti
Kshetra Samachara

Kshetra Samachara

24/09/2022 10:28 pm

Cinque Terre

5.16 K

Cinque Terre

0

ಸಂಬಂಧಿತ ಸುದ್ದಿ