ಮಂಗಳೂರು: ನಿನ್ನೆ ನವದೆಹಲಿಯಲ್ಲಿ ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಹರೇಕಳ ಹಾಜಬ್ಬ ಇಂದು ಬೆಳಿಗ್ಗೆ ಮಂಗಳೂರಿಗೆ ಆಗಮಿಸಿದರು.
ಇದೇ ವೇಳೆ ಅಕ್ಷರ ಸಂತ, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ಮಂಗಳೂರು ನಗರದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆತ್ಮೀಯವಾಗಿ ಸ್ವಾಗತಿಸಿ, ಸನ್ಮಾನಿಸಿದರು.
ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಸಂದರ್ಭ ಮಾತನಾಡಿದ ಹಾಜಬ್ಬ ಅವರು ಮಾಧ್ಯಮದವರಿಗೆ, ಸಂಸದ ನಳಿನ್, ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿಯವರಿಗೆ ಅಭಿನಂದನೆ ಸಲ್ಲಿಸಿದರು.
Kshetra Samachara
09/11/2021 02:27 pm