ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಗಣರಾಜ್ಯೋತ್ಸವ ಆಚರಣೆ; ಸಚಿವ ಸುನಿಲ್ ಗೌರವ ವಂದನೆ

ಮಂಗಳೂರು: ನಗರದ ನೆಹರೂ ಮೈದಾನದಲ್ಲಿ ಜಿಲ್ಲಾಡಳಿತ ವತಿಯಿಂದ 73ನೇ ಗಣರಾಜ್ಯೋತ್ಸವ ಆಚರಣೆ ಜರುಗಿತು.

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಬಳಿಕ ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದರು.

ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜನಪ್ರತಿನಿಧಿಗಳು, ಅಧಿಕಾರಿಗಳು, ಪದ್ಮಶ್ರೀ ಪುರಸ್ಕೃತರಾದ ಹರೇಹಳ ಹಾಜಬ್ಬ ಹಾಗೂ ಅಮೈ ಮಹಾಲಿಂಗ ನಾಯ್ಕ ಉಪಸ್ಥಿತರಿದ್ದರು. ಆಕರ್ಷಕ ಪಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮ ಜನಮನ ರಂಜಿಸಿತು.

Edited By : Manjunath H D
Kshetra Samachara

Kshetra Samachara

26/01/2022 01:58 pm

Cinque Terre

5.93 K

Cinque Terre

0